

ಸುಬ್ರಹ್ಮಣ: ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯದ ಕುಮಾರಧಾರ ಸಮೀಪ ಪರ್ವತಮುಖಿಯಲ್ಲಿ ಭಾರಿ ಮಳೆಗೆ ಮನೆ ಮೇಲೆ ಗುಡ್ಡೆ ಕುಸಿದು ಮಣ್ಣಿನಡಿ ಸಿಲುಕಿದ್ದ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ.
ಕುಮಾರಧಾರಾ-ರೂಪಾಶ್ರೀ ದಂಪತಿ ಮಕ್ಕಳಾದ ಶ್ರುತಿ (11) ಮತ್ತು ಜ್ಞಾನಶ್ರೀ(8) ಮೃತರು. ಮನೆಯಲ್ಲಿ ಇಬ್ಬರು ವೃದ್ಧರೊಂದಿಗೆ ಈ ಮಕ್ಕಳು ಇದ್ದರು.
ಸೋಮವಾರ ರಾತ್ರಿ ಈ ದುರ್ಘಟನೆ ಸಂಭವಿಸಿದೆ. ವಿಷಯ ತಿಳಿದು ಪೊಲೀಸರು ಸ್ಥಳಕ್ಕೆ ಧಾವಿಸಿ, ಸ್ಥಳೀಯರೊಂದಿಗೆ ಜೆಸಿಬಿ ಬಳಸಿ ಮಣ್ಣು ತೆರವು ಕಾರ್ಯದಲ್ಲಿ ತೊಡಗಿದ್ದರು. ಈ ವೇಳೆ ಮೃತದೇಹ ಪತ್ತೆಯಾದೆ.