

ಕನಕಪುರ: ತಾಲೂಕಿನ ಹೊನ್ನಗನಹಳ್ಳಿ ಆಟೋ ಹಾಗೂ ಗೂಡ್ಸ್ ವಾಹನದ ನಡುವೆ ಅಪಘಾತ ಸಂಭವಿಸಿ, ಆಟೋದಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟರೆ, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕಲಬುರಗಿ ಜಿಲ್ಲೆ ಆಳಂದದ ಶಿವಲಿಂಗ(19), ಬನಶಂಕರಿ ಪ್ರಜ್ವಲ್ (18) ಮೃತರು. ಗಾಯಗೊಂಡವರನ್ನು ಸೀನಾ ಮತ್ತು ದರ್ಶನ್ ಎಂದು ಗುರುತಿಸಲಾಗಿದೆ.
ಎಲ್ಲರೂ ಬೆಂಗಳೂರಿನಲ್ಲಿದ್ದರು ಎನ್ನಲಾಗಿದ್ದು, ಗುರುವಾರ ಮಳವಳ್ಳಿ ಕಡೆಯಿಂದ ಬರುವಾಗ ದುರಂತ ಸಂಭವಿಸಿದೆ. ಹಾರೋಹಳ್ಳಿ ಸಮೀಪದ ದಯಾನಂದ ಸಾಗರ ಆಸ್ಪತ್ರೆಗೆ ಗಾಯಾಳುಗಳನ್ನು ದಾಖಲಿಸಲಾಗಿದ್ದು, ಮೃತದೇಹಗಳನ್ನು ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದೆ. ಸಾತನೂರು ಸಬ್ಇನ್ಸ್ಪೆಕ್ಟರ್ ಹರೀಶ್ ಸ್ಥಳ ಪರಿಶೀಲಿಸಿದ್ದು, ಸಾತನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.