ಬಸ್-ಕಾರು ಡಿಕ್ಕಿಯಾಗಿ ಇಬ್ಬರು ಸಾವು

HNR Accident
Published on

ಹೊನ್ನಾವರ: ಸರ್ಕಾರಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ತಾಲುಕಿನ ಉಪ್ರೋಣಿ ಬಳಿ ಬೆಂಗಳೂರು-ಹೊನ್ನಾವರ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ನಡೆದಿದೆ.

ಸ್ಕಾರ್ಪಿಯೋ ಕಾರಿನಲ್ಲಿದ್ದ ಬೆಂಗಳೂರಿನ ರಕ್ಷಿತ್ (30) ಮತ್ತು ಶ್ರೀನಿವಾಸ (50) ಎಂಬುವವರು ಮೃತಪಟ್ಟಿದ್ದಾರೆ. ಭಟ್ಕಳದಿಂದ ಶಿರಸಿ ಮಾರ್ಗವಾಗಿ ಹುಬ್ಬಳ್ಳಿಗೆ ಹೊರಟಿದ್ದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಮತ್ತು ಬೆಂಗಳೂರಿನ ಕೆ.ಆರ್.ಪುರಂನಿಂದ ಹೊನ್ನಾವರದ ಕಡೆಗೆ ಹೊರಟಿದ್ದ ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ. ಕಾರಿನಲ್ಲಿದ್ದ ನಾಲ್ವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹೊನ್ನಾವರ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊನ್ನಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net