ಸರ್ಕಾರಿ ಬಸ್‌ಗಳ ಮಧ್ಯೆ ಮುಖಾಮುಖಿ ಡಿಕ್ಕಿ; ಇಬ್ಬರ ಸಾವು, ಹಲವರು ಗಂಭೀರ

Bus Accident
Published on

ವಿಜಯಪುರ: ರಾಜ್ಯ ಸಾರಿಗೆ ಸಂಸ್ಥೆಗೆ ಸೇರಿದ ಎರಡು ಬಸ್ಸುಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮಹಿಳೆಯರು ಮೃತಪಟ್ಟು, 10ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಜಯಪುರ ತಾಲ್ಲೂಕಿನ ಕವಲಗಿ ಗ್ರಾಮದ ಬಳಿ ನಡೆದಿದೆ.

ಮೃತರನ್ನು ವಿಜಯಪುರ ಜಿಲ್ಲೆ ಬಸನವಬಾಗೇಬಾಡಿ ತಾಲೂಕಿನ ಡೋಣೂರ ಗ್ರಾಮದ ಸಾಜೀದಾ ಬೇಗಂ (36), ಕಲಬುರಗಿ ಪಟ್ಟಣದ ನಿವಾಸಿ ರೋಹಿಣಿ ಪಂಚಾಳ (31) ಎಂದು ಗುರುತಿಸಲಾಗಿದ್ದು, ಎರಡೂ ಬಸ್ ಚಾಲಕರು ಸೇರಿದಂತೆ ಹತ್ತಕ್ಕೂ‌ ಅಧಿಕ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ.

Bus Accident

ಘಟನೆ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಸಿಂದಗಿ ಮಾರ್ಗವಾಗಿ ವಿಜಯಪುರಕ್ಕೆ ಬರುತ್ತಿದ್ದ ಬಸ್‌ ಹಾಗೂ ವಿಜಯಪುರದಿಂದ ಸಿಂದಗಿಗೆ ಹೋಗುತ್ತಿದ್ದ ಬಸ್ ನಡುವೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಇಬ್ಬರು ಮಹಿಳೆಯರು ಮೃತಪಟ್ಟಿದ್ದು, 10ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಅಪಘಾತಕ್ಕೊಳಗಾದ ಬಸ್​ಗಳನ್ನು ತೆರವು ಮಾಡಲು ಕ್ರಮ ಕೈಗೊಳ್ಳಲಾಗಿದ್ದು, ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net