

ಧಾರವಾಡ: ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಇಬ್ಬರು ಮೃತಪಟ್ಟ ಘಟನೆ ತಾಲೂಕಿನ ಕೋಟೂರ ಕ್ರಾಸ್ ಬಳಿ ಭಾನುವಾರ ರಾತ್ರಿ ನಡೆದಿದೆ. ಇಲ್ಲಿನ ಚನ್ನಬಸವೇಶ್ವರನಗರ ನಿವಾಸಿಗಳಾದ ವಿನಯ ಹಿರೇಮಠ (37) ಹಾಗೂ ಸಂದೀಪ ಸಾರಥಿ (34) ಮೃತರು. ಕೋಟೂರ ಬಳಿಯ ಹೋಟೆಲ್‌ವೊಂದರಲ್ಲಿ ರಾತ್ರಿ ಊಟ ಮಾಡಿ ಮನೆಗೆ ಮರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ದುರ್ಘಟನೆಯಲ್ಲಿ ಕಿರಣ ಪ್ಯಾಟಿಮಠ ಎಂಬುವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಗರಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.