

ರಾಯಚೂರು: ಕಾರು (Car) ಮತ್ತು ಟಿಪ್ಪರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ರಾಯಚೂರು ಮೂಲದ ಇಬ್ಬರು ಮೃತಪಟ್ಟಿರುವ ಘಟನೆ ತೆಲಂಗಾಣದ ಮಹಿಬೂಬ್ನಗರ ಜಿಲ್ಲೆಯಲ್ಲಿ ನಡೆದಿದೆ.
ಮೃತರನ್ನು ಲಿಂಗಸುಗೂರು ಮೂಲದ ಬಸವರಾಜ್ ನಂದಿಕೋಲಮಠ (56),ಜಂಗಮ ಮೂರ್ತಿ(55) ಎಂದು ಗುರುತಿಸಲಾಗಿದೆ.
ತೆಲಂಗಾಣದ ಮಹಿಬೂbffನಗರ ಜಿಲ್ಲೆಯ ಕೊಲ್ಲಿಪಾಕಿಯಿಂದ ಮರಳುವಾಗ ಅಪಘಾತ ಸಂಭವಿಸಿದ್ದು, ಮಹಿಬೂಬ್ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಚಾರ ತಿಳಿದು ಸ್ಥಳಕ್ಕೆ ದೌಡಾಯಿಸಿದ ಅಧಿಕಾರಿಗಳು ಮೃತರ ಕುಟುಂಬಸ್ಥರಿಗೆ ವಿಚಾರ ತಿಳಿಸಿ ಮೃತದೇಹಗಳನ್ನು ಮರಣೊತ್ತರ ಪರೀಕ್ಷೆಗೆ ರವಾನಿಸಿದ್ದಾರೆ.