

ಕಲಬುರಗಿ: KKRTC ಬಸ್ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬರ್ತ್ಡೇ ಪಾರ್ಟಿಗೆಂದು ಹೊರಟಿದ್ದ ಸ್ನೇಹಿತರೊಬ್ಬರು ಅಪಘಾತದಾಲ್ಲಿ ಮೃತಪಟ್ಟು ಮಸಣ ಸೇರಿರುವ ದಾರುಣ ಘಟನೆ ಕಲಬುರಗಿ ಜಿಲ್ಲೆ ಜೇವರ್ಗಿ ತಾಲ್ಲೂಕಿನ ಕಟ್ಟಿ ಸಂಗಾವಿ ಬಳಿ ನಡೆದಿದೆ.
ಮೃತ ದುರ್ದೈವಿಗಳನ್ನು ಯಾದಗಿರಿ ಜಿಲ್ಲೆ ಶಹಾಪುರ ನಿವಾಸಿಗಳಾದ ಪ್ರಜ್ವಲ್ (22), ಶಶಿಕುಮಾರ್ (21) ಎಂದು ಗುರುತಿಸಲಾಗಿದೆ. ಸ್ನೇಹಿತರೊಬ್ಬರ ಬರ್ತ್ಡೇ ಪಾರ್ಟಿಗೆ ತೆರಳುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನ ನಿವಾಸಿಗಳಾದ ಪ್ರಜ್ವಲ್ ಹಾಗೂ ಶಶಿಕುಮಾರ್ ಸ್ನೇಹಿತರೊಬ್ಬರ ಬರ್ತ್ಡೇ ಪಾರ್ಟಿಯಲ್ಲಿ ಪಾಲ್ಗೊಳ್ಳಲೆಂದು ತೆರಳುತ್ತಿದ್ದರು. ಈ ವೇಳೆ ಎದುರಿಗೆ ಬಂದ ಸಾರಿಗೆ ಹಾಗೂ ಬೈಕ್ಗೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ದುರ್ಘಟನೆ ಸಂಭವಿಸಿದೆ.
ಅಪಘಾತದ ರಭಸಕ್ಕೆ ಬೈಕ್ ಸಂಪೂರ್ಣವಾಗಿ ಜಖಂಗೊಂಡಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಜೇವರ್ಗಿ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.