ಕಬ್ಬಿನ ಗದ್ದೆಯಲ್ಲಿ ಎರಡು ಚಿರತೆ ಮರಿ ಪತ್ತೆ

ಕಬ್ಬಿನ ಗದ್ದೆಯಲ್ಲಿ ಎರಡು ಚಿರತೆ ಮರಿ ಪತ್ತೆ
Published on

ಕೆ.ಎಂ.ದೊಡ್ಡಿ: ಸಮೀಪದ ಅಣ್ಣೂರು ಗ್ರಾಮದ ಸಿದ್ದೇಗೌಡರ ಕಬ್ಬಿನ ಗದ್ದೆಯಲ್ಲಿ ಎರಡು ಚಿರತೆ ಮರಿಗಳು ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ಜಮೀನಿನಲ್ಲಿ ಬುಧವಾರ ಕಬ್ಬು ಕಟಾವು ಮಾಡುತ್ತಿದ್ದಾಗ ಕೂಲಿಕಾರ್ಮಿಕರು ಚಿರತೆ ಮರಿಗಳನ್ನು ಕಂಡು ಭಯಭೀತರಾಗಿದ್ದಾರೆ. ತಕ್ಷಣ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸುದ್ದಿ ಮುಟ್ಟಿಸಿದ್ದು, ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆ ಮರಿಗಳನ್ನು ರಕ್ಷಿಸಿ ತಾಯಿ ಚಿರತೆ ಸೆರೆಹಿಡಿಯಲು ಬೋನನ್ನು ಇಟ್ಟಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net