

ಬೆಂಗಳೂರು: ಬೇರೆ ಯಾರ ಮೇಲಾದರೂ ಗಂಭೀರ ಅಪರಾಧ ಎಸಗಿದವರನ್ನು ಪೊಲೀಸರು ರೌಡಿಪಟ್ಟಿಗೆ ಸೇರಿಸುವುದು ಸರ್ವೇಸಾಮಾನ್ಯ. ಆದರೆ ಇಲ್ಲಿಬ್ಬರು ಪೊಲೀಸರ ಮೇಲೆಯೇ ಹಲ್ಲೆ ಮಾಡಿ ರೌಡಿಗಳೆನಿಸಿಕೊಂಡಿದ್ದಾರೆ.
ಅರ್ಥಾತ್, ಪೊಲೀಸರ ಮೇಲೆ ಹಲ್ಲೆ ಮಾಡಿದ್ದ ಇಬ್ಬರನ್ನು ಪೊಲೀಸರು ರೌಡಿಶೀಟರ್ ಪಟ್ಟಿಗೆ ಸೇರಿಸಿದ್ದಾರೆ. ಧೀರಜ್ ಹಾಗೂ ಮನೋಜ್ ಎಂಬಿಬ್ಬರು ರೌಡಿಶೀಟರ್ ಪಟ್ಟಿಗೆ ಸೇರಿಸಲ್ಪಟ್ಟವರು. ಇವರು ಯಲಹಂಕ ನ್ಯೂಟೌನ್ ಪೊಲೀಸರ ಮೇಲೆ ದೊಣ್ಣೆಗಳಿಂದ ಹಲ್ಲೆ ನಡೆಸಿದ್ದರು.
ಕರ್ತವ್ಯನಿರತ ಪೊಲೀಸರ ಮೇಲೆ ಹಲ್ಲೆ ಮಾಡಿದ ಹಿನ್ನೆಲೆಯಲ್ಲಿ ಮನೋಜ್ ಹಾಗೂ ಧೀರಜ್ ಮೇಲೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದರು. ಪ್ರಕರಣದ ಗಂಭೀರತೆ ಹಿನ್ನೆಲೆಯಲ್ಲಿ ಇವರನ್ನು ರೌಡಿಪಟ್ಟಿಗೆ ಸೇರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.