ನಿವಾರ್ ಬೆನ್ನಲ್ಲೇ ಮತ್ತೆರಡು ಸೈಕ್ಲೋನ್

Rain
Published on

ಬೆಂಗಳೂರು: ನಿವಾರ್ ಚಂಡಮಾರುತದಿಂದ ಚೇತರಿಸಿ ಕೊಳ್ಳುತ್ತಿರುವ ಬೆನ್ನಲ್ಲೇ ಇದೀಗ ಇನ್ನೆರಡು ಚಂಡಮಾರುತ ಉಂಟಾಗುವ ಸಾಧ್ಯತೆ ಇದೆ.

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಮುಂದಿನ 36 ಗಂಟೆಯೊಳಗೆ ಚಂಡಮಾರುತ ವಾಗಿ ಪರಿವರ್ತನೆಯಾಗುವ ಸಾಧ್ಯತೆಯಿದೆ. ಅಲ್ಲದೆ, ಅರಬ್ಬಿ ಸಮುದ್ರದಲ್ಲಿಯೂ ವಾಯುಭಾರ ಕುಸಿತವಾಗಿದ್ದು, ಚಂಡಮಾರುತ ಸೃಷ್ಟಿಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಡಿ.1ರಿಂದ 4ವರೆಗೆ ಭಾರಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಡಿ.2ರಂದು ತಮಿಳುನಾಡಿನ ಕರಾವಳಿ ಭಾಗಕ್ಕೆ ಚಂಡಮಾರುತ ಅಪ್ಪಳಿಸಲಿದೆ. ಇದರ ಪರಿಣಾಮದಿಂದ ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ, ಮಾಹೆ, ಲಕ್ಷದೀಪ, ಕರಾವಳಿ ಆಂಧ್ರಪ್ರದೇಶ ಹಾಗೂ ರಾಯಲಸೀಮಾ ಸೇರಿ ಇತರೆ ಭಾಗಗಳಲ್ಲಿ ಡಿ.1ರಿಂದ 3ರವರೆಗೆ ಭಾರಿ ಮಳೆಯಾಗಲಿದೆ. ಇತ್ತೀಚಿಗಷ್ಟೇ ನಿವಾರ್ ಚಂಡಮಾರತ ಪ್ರಭಾವದಿಂದ ತತ್ತರಿಸಿದ್ದ ತಮಿಳುನಾಡು ಹಾಗೂ ಆಂಧ್ರಪ್ರದೇಶವೂ ಮತ್ತೆರಡು ಚಂಡಮಾರುತ ಎದುರಿಸಬೇಕಿದೆ.

ರಾಜ್ಯದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಡಿ.1ರಿಂದ 4ವರೆಗೆ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗಲಿದೆ. ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಕೆಲ ಜಿಲ್ಲೆಗಳಲ್ಲಿಯೂ ಮುಂದಿನ 5 ದಿನ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net