ಇಬ್ಬರು ಅಧಿಕಾರಿಗಳು ಎಸಿಬಿ ಬಲೆಗೆ

ACB 1482465007-8956
Published on

ರಾಯಬಾಗ: ಟೆಂಡರ್ ಬಿಲ್ ಪಾಸ್‌ಗಾಗಿ ಚೆಕ್ ನೀಡಲು ಲಂಚದ ಬೇಡಿಕೆ ಇಟ್ಟಿದ್ದ ತಾಲೂಕಿನ ಚಿಂಚಲಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸೇರಿ ಇಬ್ಬರು ಅಧಿಕಾರಿಗಳು ಲಂಚ ಪಡೆಯುವಾಗ ಮಂಗಳವಾರ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.

ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಶಿವರಾಜ ಪೂಜಾರ ಮತ್ತು ದ್ವಿತೀಯ ದರ್ಜೆ ಸಹಾಯಕ ಮಾರುತಿ, ಎಸಿಬಿ ಬಲೆಗೆ ಬಿದ್ದವರು. ಟೆಂಡರ್ ಬಿಲ್‌ಪಾಸ್ ಮಾಡಿ ಚೆಕ್ ನೀಡಲು 25 ಸಾವಿರ ರೂ. ಬೇಡಿಕೆ ಇಟ್ಟಿದ್ದರು. ಇನ್‌ಸ್ಪೆಕ್ಟರ್ ಎ.ಎಸ್. ಗೂದಿಗೊಪ್ಪ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಆರೋಪಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net