ಬೈಕ್​ಗೆ ಬಸ್ ಡಿಕ್ಕಿಯಾಗಿ ಇಬ್ಬರು ಸಾವು

bus accident
Published on

ಬಂಕಾಪುರ: ಬೈಕ್​ಗೆ ಹಿಂದಿನಿಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್​ನಲ್ಲಿದ್ದ ಇಬ್ಬರು ಮೃತಪಟ್ಟು ಬಾಲಕ ಗಂಭೀರ ಗಾಯಗೊಂಡ ಘಟನೆ ಬಂಕಾಪುರ ಟೋಲ್ ನಾಕಾ ಬಳಿ ಮಂಗಳವಾರ ರಾತ್ರಿ ಸಂಭವಿಸಿದೆ.

ಹಾನಗಲ್ಲ ತಾಲೂಕಿನ ಮಾಸನಕಟ್ಟಿ ಗ್ರಾಮದ ನಿಂಗಪ್ಪ ಸ್ವಾದಿ (56), ಪ್ರೇಮಕ್ಕ ಸ್ವಾದಿ (45) ಮೃತಪಟ್ಟು, ಸಮರ್ಥ ಕರಲಿಂಗಣ್ಣವರ(9) ಗಂಭೀರವಾಗಿ ಗಾಯಗೊಂಡಿದ್ದಾನೆ.

ಬರದೂರ ಗ್ರಾಮದಿಂದ ಬಂಕಾಪುರ ಕಡೆಗೆ ಬರುತ್ತಿದ್ದ ಬೈಕ್​ಗೆ ಹಾವೇರಿಯಿಂದ ಹುಬ್ಬಳ್ಳಿ ಕಡೆಗೆ ಹೋಗುತ್ತಿದ್ದ ಸರ್ಕಾರಿ ಬಸ್ ಡಿಕ್ಕಿ ಹೊಡೆದಿದ್ದರಿಂದ ಅಪಘಾತ ಸಂಭವಿಸಿದೆ.

ಬಸ್ ಚಾಲಕನ ನಿರ್ಲಕ್ಷ್ಯತನವೇ ಅಪಘಾತಕ್ಕೆ ಕಾರಣ ಎಂದು ದೂರಿನಲ್ಲಿ ತಿಳಿಸಲಾಗಿದೆ. ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net