8 ಮಂದಿ ಪ್ರಯಾಣಿಸುತ್ತಿದ್ದ ಆಟೋ ಪಲ್ಟಿ; ಸ್ಥಳದಲ್ಲೇ ಇಬ್ಬರ ಸಾವು, ನಾಲ್ವರಿಗೆ ಗಾಯ..

Accident
Published on

ತುಮಕೂರು: ಎಂಟು ಮಂದಿ ಪ್ರಯಾಣಿಕರನ್ನು ಕರೆದುಕೊಂಡು ಹೋಗುತ್ತಿದ್ದ ಆಟೋರಿಕ್ಷಾ ಪಲ್ಟಿಯಾಗಿದ್ದು, ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದರೆ, ನಾಲ್ವರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ನಲಿಗಾನಹಳ್ಳಿ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಆಟೋದಲ್ಲಿದ್ದ ಬಂಡಪ್ಪ (60), ಈರ ಬಂಡಪ್ಪ (65) ಸಾವಿಗೀಡಾದವರು. ಈ ಆಟೋ ಪಾವಗಡ ತಾಲೂಕಿನ ಬ್ಯಾಡನೂರು ಕಡೆಯಿಂದ ಪಾವಗಡ ಕಡೆಗೆ ಸಾಗುತ್ತಿತ್ತು.

ಅಪಘಾತಕ್ಕೀಡಾದ ಆಟೋದಲ್ಲಿ ಎಂಟು ಮಂದಿ ಪ್ರಯಾಣಿಕರು ಇದ್ದರು ಎನ್ನಲಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾಗಿದೆ. ಅಪಘಾತದ ತೀವ್ರತೆಗೆ ಇಬ್ಬರು ಸ್ಥಳದಲ್ಲೇ ಸಾವಿಗೀಡಾದರೆ ಇನ್ನು ನಾಲ್ವರು ಸಣ್ಣಪುಟ್ಟ ಗಾಯಗಳಿಗೆ ಒಳಗಾಗಿದ್ದಾರೆ. ಗಾಯಾಳುಗಳನ್ನು ಪಾವಗಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಾವಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net