ಪ್ರತ್ಯೇಕ ಅಪಘಾತದಲ್ಲಿ ಇಬ್ಬರು ಸಾವು

DEC. 26, HNP., PH.2.
ಹೊಳೆನರಸೀಪುರ ತಾ. ತಟ್ಟೆಕೆರೆ ಗ್ರಾಮದ ಸಮೀಪ ನಡೆದ ಅಪಘಾತದಲ್ಲಿ ಮೃತಪಟ್ಟ ಕೆ.ಆರ್.ನಗರ ತಾ. ಮಾದಾಪುರ ಗ್ರಾಮದ ಕೃಷ್ಣ ಚಲಾಯಿಸುತ್ತಿದ್ದ ದ್ವಿಚಕ್ರ ವಾಹನ.
Published on

ಹೊಳೆನರಸೀಪುರ: ತಾಲೂಕಿನ ತಟ್ಟೆಕೆರೆ ಗ್ರಾಮದ ಹೆದ್ದಾರಿ ಹಾಗೂ ಹಂಗರಹಳ್ಳಿ ಗ್ರಾಮ ಸಮೀಪದ ಹೆದ್ದಾರಿಯಲ್ಲಿ ನಡೆದ ಪ್ರತ್ಯೇಕ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ.

ತಟ್ಟೆಕೆರೆ ಗ್ರಾಮ ಸಮೀಪದ ಹೆದ್ದಾರಿಯಲ್ಲಿ ಸೋಮವಾರ ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಕೆ.ಆರ್.ನಗರ ತಾಲೂಕು ಮಾದಾಪುರ ಗ್ರಾಮದ ಕೃಷ್ಣ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಂಗರಹಳ್ಳಿ ಗ್ರಾಮ ಸಮೀಪದ ಹೆದ್ದಾರಿಯಲ್ಲಿ ಸೋಮವಾರ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಮಾವಿನಕೆರೆ ಗ್ರಾಮದ ದೊರೆಸ್ವಾಮಿ(80) ಸ್ಥಳದಲ್ಲೇ ಮೃತಪಟಿದ್ದಾರೆ. ಚಾಲಕ ವಾಹನದೊಂದಿಗೆ ಪರಾರಿಯಾಗಿದ್ದಾನೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net