

ಚನ್ನಪಟ್ಟಣ: ತಾಲೂಕಿನ ಕೋಲೂರು ಸಮೀಪದ ಎಕ್ಸ್ಪ್ರೆಸ್ ಹೈವೇಯಲ್ಲಿ ಬುಧವಾರ ರಾತ್ರಿ ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ.
ಗೋವಾದ ಡಾರೇಲ್ ನೋವಾ ಅಲೇನ್ ವ್ಭೆಜ್(56) ಹಾಗೂ ರಾಸ್ ್ರಾನ್ಸಿಸ್ ವೆಬಜ್(44) ಮೃತರು. ನೀಲ್ ರಿಯಾ, ನತನ್ಎಟ್ ಮಿಮೊಜ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ನಾಲ್ವರು ಸ್ನೇಹಿತರು ಪ್ರವಾಸಕ್ಕಾಗಿ ರಾಜ್ಯಕ್ಕೆ ಬಂದಿದ್ದರು.
ಬೆಂಗಳೂರಿನಿಂದ ಮೈಸೂರು ಕಡೆಗೆ ಹೆದ್ದಾರಿಯಲ್ಲಿ ಹೊರಟಿದ್ದ ಕಾರು ಅಡ್ಡಬಂದ ಕ್ಯಾಂಟರ್ಗೆ ಡಿಕ್ಕಿ ಹೊಡೆದಿದೆ. ಈ ರಭಸಕ್ಕೆ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಕಾರು ಸಂಪೂರ್ಣ ಜಖಂಗೊಂಡಿದೆ. ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀೆ ನಡೆಸಿದ ಬಳಿಕ ಕುಟುಂಬಸ್ಥರಿಗೆ ಮೃತದೇಹಗಳನ್ನು ಹಸ್ತಾಂತರಿಸಲಾಗಿದೆ. ಸ್ಥಳಕ್ಕೆ ಚನ್ನಪಟ್ಟಣ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗಾಯಾಳು ನೀಲ್ ರಿಯಾ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.