

ವಿಜಯನಗರ: ಅಂಗಡಿಯೊಂದರಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಹೊತ್ತಿಕೊಂಡ ಬೆಂಕಿಯನ್ನು ಆರಿಸಲು ಬಂದ ಸಂದರ್ಭದಲ್ಲೇ ಅಲ್ಲಿದ್ದ ಸಿಲಿಂಡರ್ ಸ್ಫೋಟಗೊಂಡಿದ್ದು, ಇಬ್ಬರು ಯುವಕರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ವಿಜಯನಗರ ಜಿಲ್ಲೆಯಲ್ಲಿ ಇಂಥದ್ದೊಂದು ಅವಘಡ ಸಂಭವಿಸಿದೆ.
ಶಿವಪ್ಪ (28) ಹಾಗೂ ಶ್ರೀಕಾಂತ್ (23) ಸಾವಿಗೀಡಾದವರು. ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಗುಡೇಕೋಟೆ ಬಳಿಯ ಸಂಕ್ಲಾಪುರ ಎಂಬಲ್ಲಿ ಈ ಅವಘಡ ಸಂಭವಿಸಿದೆ. ಇಲ್ಲಿನ ಮೊಂಡ ಬೋರಯ್ಯ ಎಂಬವರ ಎಗ್ರೈಸ್ ಅಂಗಡಿಯಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿತ್ತು.
ಶಾರ್ಟ್ ಸರ್ಕ್ಯೂಟ್ನಿಂದ ಹೊತ್ತಿಕೊಂಡಿದ್ದ ಬೆಂಕಿ ಆರಿಸಲು ಎಂದು ಶಿವಪ್ಪ ಮತ್ತು ಶ್ರೀಕಾಂತ್ ಧಾವಿಸಿದ್ದರು. ಹೀಗೆ ಬೆಂಕಿಯನ್ನು ಆರಿಸಲು ಯತ್ನಿಸುತ್ತಿದ್ದ ಸಂದರ್ಭದಲ್ಲೇ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿತ್ತು. ಸ್ಫೋಟದ ತೀವ್ರತೆಗೆ ಇಬ್ಬರ ದೇಹಗಳು ಛಿದ್ರಗೊಂಡಿವೆ. ಸ್ಥಳಕ್ಕೆ ಗುಡಕೋಟೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.