

ಬೆಳಗಾವಿ: ಜಿಲ್ಲೆಯಲ್ಲಿ ಮಂಗಳವಾರ ಕರೊನಾಗೆ ಮತ್ತೆ ನಾಲ್ವರು ಬಲಿಯಾಗಿದ್ದಾರೆ. ಬೆಳಗಾವಿ ತಾಲೂಕಿನ 55 ಹಾಗೂ 60 ವರ್ಷದ ಇಬ್ಬರು ಪುರುಷರು, 30 ಮತ್ತು 38 ವರ್ಷದ ಇಬ್ಬರು ಮಹಿಳೆಯರು ಸೋಂಕಿನಿಂದ ಮೃತಪಟ್ಟಿದ್ದಾರೆ. ಕರೊನಾದಿಂದ ಮೃತಪಟ್ಟವರ ಸಂಖ್ಯೆ 30ಕ್ಕೆ ಏರಿಕೆಯಾಗಿದೆ.
ಮಂಗಳವಾರ 23 ಜನರಲ್ಲಿ ಕರೊನಾ ವೈರಸ್ ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,102ಕ್ಕೆ ಏರಿಕೆಯಾಗಿದೆ. ಬೆಳಗಾವಿ ತಾಲೂಕಿನಲ್ಲಿ 5, ಬೈಲಹೊಂಗಲದಲ್ಲಿ 11, ಹುಕ್ಕೇರಿಯಲ್ಲಿ 3, ಚಿಕ್ಕೋಡಿಯಲ್ಲಿ 4 ಕರೊನಾ ಪ್ರಕರಣಗಳು ದೃಢಪಟ್ಟಿವೆ.
22 ಸೋಂಕಿತರು ಗುಣಮುಖ: 2,152 ಶಂಕಿತರ ಗಂಟಲು ದ್ರವದ ಪರೀಕ್ಷಾ ವರದಿ ಬರುವುದು ಬಾಕಿ ಇದೆ. ಕರೊನಾ ವೈರಸ್‌ಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಇಲ್ಲಿಯವರೆಗೆ 36,726 ಜನರ ಮೇಲೆ ನಿಗಾ ವಹಿಸಲಾಗಿದೆ. 6,930 ಜನರು 14 ದಿನ ಮನೆಯಲ್ಲಿ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ. 8,532 ಜನ 14 ದಿನಗಳ ಕ್ವಾರಂಟೈನ್ ಪೂರ್ಣಗೊಳಿಸಿದ್ದಾರೆ. 20,653 ಜನ 28 ದಿನಗಳ ಕ್ವಾರಂಟೈನ್ ಪೂರ್ಣಗೊಳಿಸಿದ್ದಾರೆ.
35,430 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಲಾಗಿದೆ. 31,533 ಮಾದರಿಗಳು ನೆಗೆಟಿವ್ ಬಂದಿವೆ. ಮಂಗಳವಾರ 22 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಒಟ್ಟಾರೆ 461 ಸೋಂಕಿತರು ಗುಣಮುಖರಾದಂತಾಗಿದೆ. ಜಿಲ್ಲೆಯಲ್ಲಿ ಒಟ್ಟು 611 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಕಟಣೆ ತಿಳಿಸಿದೆ.