

ಬೆಂಗಳೂರು: ನಗರದ ಪುಟ್ಟೇನಹಳ್ಳಿ ವ್ಯಾಪ್ತಿಯಲ್ಲಿ ಹೋಟೆಲ್ ರೂಂ ಒಂದರಲ್ಲಿ ಅಂದರ್ ಬಾಹರ್ ಆಡುತ್ತಾ ಕುಳಿತು, ಪೊಲೀಸರ ವಶಕ್ಕೆ ಸಿಲುಕಿಬಿದ್ದಿದ್ದ ಇಬ್ಬರು ಪೊಲೀಸ್ ಪೇದೆಗಳನ್ನು ಅಮಾನತು ಮಾಡಲಾಗಿದೆ. ಮಲ್ಲೇಶ್ ಮತ್ತು ಗವಿ ಸಿದ್ದೇಶ್ ಅಮಾನತಾದ ಸಿಬ್ಬಂದಿಗಳು.
ಅಕ್ಟೋಬರ್ 19ರಂದು ಪುಟ್ಟೇನಹಳ್ಳಿಯ ಹೋಟೆಲ್ ಒಂದರ ಮೇಲೆ ದಾಳಿ ಮಾಡಲಾಗಿತ್ತು. ಆ ಸಮಯದಲ್ಲಿ ಅಲ್ಲಿ ಅಂದರ್ ಬಾಹರ್ ಆಡುತ್ತಿದ್ದ ಒಂಬತ್ತು ಜನರನ್ನು ಬಂಧಿಸಲಾಗಿತ್ತು. 52 ಸಾವಿರ ರೂಪಾಯಿಯನ್ನೂ ವಶ ಪಡಿಸಿಕೊಳ್ಳಲಾಗಿತ್ತು. ಈ ಪ್ರಕರಣದ ತನಿಖೆ ನಡೆಸಿರುವ ಅಧಿಕಾರಿಗಳು ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಿದ್ದಾರೆ. ಈ ಇಬ್ಬರು ಸಿಬ್ಬಂದಿಗಳು ಉಪ್ಪಾರಪೇಠೆ ಪೊಲೀಸ್ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದವರು ಎಂದು ಹೇಳಲಾಗಿದೆ.