ರಸ್ತೆ ವಿಭಜಕ್ಕೆ ಬೈಕ್ ಡಿಕ್ಕಿ ಹೊಡೆದು ಇಬ್ಬರು ಸವಾರರು ಸಾವು

Bike Accident_2
Published on

ಮೈಸೂರು: ಮೇಟಗಳ್ಳಿ ರಸ್ತೆಯ ಜಿಲ್ಲಾಸ್ಪತ್ರೆ ಎದುರು ರಸ್ತೆ ವಿಭಜಕ್ಕೆ ಬೈಕ್ ಡಿಕ್ಕಿ ಹೊಡೆದು ಇಬ್ಬರು ಮತಪಟ್ಟಿದ್ದಾರೆ.


ಬಿಎಂಶ್ರೀ ನಗರದ ಜನಾರ್ದನ್(25), ಸಚಿನ್(16) ಮತ ಬೈಕ್ ಸವಾರರು. ಇವರು ಶನಿವಾರ ರಾತ್ರಿ 11 ಗಂಟೆಯಲ್ಲಿ ಬೈಕ್‌ನಲ್ಲಿ ಮೇಟಗಳ್ಳಿ ಕಡೆಗೆ ತೆರಳುತ್ತಿದ್ದರು.

ಈ ವೇಳೆ ನಿಯಂತ್ರಣ ಕಳೆದುಕೊಂಡ ಬೈಕ್ ರಸ್ತೆ ವಿಭಜಕ್ಕೆ ಡಿಕ್ಕಿ ಹೊಡೆದು ಇಬ್ಬರೂ ತೀವ್ರವಾಗಿ ಗಾಯಗೊಂಡರು.

ತಕ್ಷಣ ಇವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ವಿವಿ ಪುರಂ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net