

ಹಾವೇರಿ: ಕಾರು-ಬೈಕ್ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದರೂ ಸವಾರರಿಬ್ಬರೂ ಪವಾಡಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತದ ಆ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲೂ ಸೆರೆಯಾಗಿದೆ.
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಗರದ ಪಿ.ಬಿ.ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ದ್ವಿಪಥ ರಸ್ತೆಯಲ್ಲಿ ಒಂದು ಕಡೆಯಿಂದ ಮತ್ತೊಂದು ಕಡೆಗೆ ಸಾಗಲು ಬೈಕ್ ಸವಾರರು ಮುನ್ನುಗ್ಗಿದಾಗ ಅದೇ ದಿಕ್ಕಿನಲ್ಲಿ ಸಾಗಿದ ಕಾರು ಡಿಕ್ಕಿಯಾಗಿದೆ.
ಕಾರು ಡಿಕ್ಕಿಯಾದ ರಭಸಕ್ಕೆ ಬೈಕ್ ಉರುಳಿ ಬಿದ್ದಿದ್ದು ಸವಾರರಿಬ್ಬರೂ ಕೆಳಕ್ಕೆ ಬಿದ್ದು, ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿರುವ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದೆ. ಗಾಯಾಳುಗಳು ಹಿರೆಕೇರೂರು ನಿವಾಸಿಗಳಾಗಿದ್ದು, ಹರಿಹರದಿಂದ ವಾಪಸ್ ಊರಿಗೆ ಹೋಗುವಾಗ ಈ ಅಪಘಾತ ಸಂಭವಿಸಿದೆ.