ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ, ಸವಾರರಿಬ್ಬರು ಸಾವು

Bike Accident
Published on

ನರಗುಂದ: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿ ತೆರಳುತ್ತಿದ್ದ ಮೂವರು ಸವಾರರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಮತ್ತೊಬ್ಬ ಗಂಭೀರ ಗಾಯಗೊಂಡಿರುವ ಘಟನೆ ತಾಲೂಕಿನ ಹುಣಸೀಕಟ್ಟಿ ಗ್ರಾಮದ ಬಳಿ ಭಾನುವಾರ ನಡೆದಿದೆ.

ಹುಣಸೀಕಟ್ಟಿ ಗ್ರಾಮದ ನಿಂಗಪ್ಪ ಮಾದರ (40), ಯಮನಪ್ಪ ಮಾದರ (31) ಮೃತಪಟ್ಟವರು. ಮಂಜುನಾಥಗೌಡ ಶಂಭುಲಿಂಗಗೌಡ ಹುಡೇದಮನಿ (48) ಎಂಬುವರ ತಲೆಗೆ ಗಂಭೀರ ಗಾಯಗಳಾಗಿವೆ. ನರಗುಂದ ಬಾಬಾಸಾಹೇಬ ಭಾವೆ ಸರ್ಕಾರಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿ ಕೆಎಂಸಿಗೆ ದಾಖಲಿಸಲಾಗಿದೆ. ಮೂವರು ನರಗುಂದದಿಂದ ತರಕಾರಿ ಸಂತೆ ಮಾಡಿಕೊಂಡು ಒಂದೇ ಬೈಕ್‌ನಲ್ಲಿ ಹುಣಸೀಕಟ್ಟಿಗೆ ತೆರಳುತ್ತಿದ್ದಾಗ ಮಾರ್ಗ ಮಧ್ಯದ ಶ್ರೀ ಬಸವೇಶ್ವರ ದೇವಸ್ಥಾನದ ಬಳಿ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಅಪಘಾತಕ್ಕೆ ಕಾರಣವಾದ ಅಪರಿಚಿತ ವಾಹನ ಪರಾರಿಯಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net