

ಹುಬ್ಬಳ್ಳಿ: ಅಪರಿಚಿತ ವಾಹನ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರ ದೇಹಗಳು ಛಿದ್ರವಾದ ಘಟನೆ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ.
ನಗರ ಹೊರವಲಯದ ಗೋಕುಲ ಗ್ರಾಮದ ಧಾರಾವತಿ ಹನುಮಂತ ದೇವಸ್ಥಾನದ ಬಳಿಯ ಬೈಪಾಸ್‌ನಲ್ಲಿ ನಡೆದ ಅವಘಡದಲ್ಲಿ
ಬೆಂಗಳೂರಿನ ಗೋಪಾಲಕೃಷ್ಣ ಉಪಾಧ್ಯಾಯ(52) ಹಾಗೂ ಧಾರವಾಡದ ಸದಾನಂದ ದೇವಾಡಿಗ (48) ಮೃತಪಟ್ಟಿದ್ದಾರೆ.
ಮೃತರಿಬ್ಬರ ಗುರುತು ಪತ್ತೆಯಾಗದ ರೀತಿಯಲ್ಲಿ ದೇಹ ಛಿದ್ರವಾಗಿ ಬಿದ್ದಿವೆ. ಸ್ಥಳಕ್ಕೆ ಉತ್ತರ ಸಂಚಾರಿ ಪೊಲೀಸ ಠಾಣೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿದ್ದಾರೆ.