ಚಾ.ನಗರ ಕ್ಷೇತ್ರಕ್ಕೆ ವಿ.ಶ್ರೀನಿವಾಸಪ್ರಸಾದ್ ಅವರ ಇಬ್ಬರು ಅಳಿಯಂದಿರು ಆಕಾಂಕ್ಷಿಗಳು

srinivasa prasad
Published on

ಮೈಸೂರು: ಚಾಮರಾಜನಗರ ಲೋಕಸಭೆ ಕ್ಷೇತ್ರಕ್ಕೆ ಇಬ್ಬರು ಅಳಿಯಂದಿರು ಆಕಾಂಕ್ಷಿಗಳಾಗಿದ್ದರೆ. ಇಬ್ಬರಲ್ಲೂ ತಂದುಹಾಕುವ ಕೆಲಸ ಮಾಡಬೇಡಿ ಎಂದು ಮಾಧ್ಯಮಗಳಿಗೆ ಸಂಸದ ಶ್ರೀನಿವಾಸಪ್ರಸಾದ್ ಟಾಂಗ್ ಕೊಟ್ಟರು.


ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಇಬ್ಬರು ಅಳಿಯಂದಿರ ಜತೆಗೆ ಸಾಕಷ್ಟು ಜನ ಆಕಾಂಕ್ಷಿಗಳಿದ್ದಾರೆ. ನನಗೆ ನನ್ನ ಅಳಿಯ ಡಾ.ಮೋಹನ್ ಟಿಕೆಟ್ ಆಕಾಂಕ್ಷಿ ಎನ್ನುವುದು ಗೊತ್ತಿತ್ತು. ಈಗ ಹರ್ಷವರ್ಧನ್ ಕೂಡ ಆಕಾಂಕ್ಷಿ ಎಂಬುದು ಗೊತ್ತಾಗಿದೆ. ಈಗ ನಮ್ಮ ಮನೆಯಲ್ಲಿ ಇಬ್ಬರು ಆಕಾಂಕ್ಷಿಗಳಿದ್ದಾರೆ. ಅವರಿಬ್ಬರೂ ತುಂಬಾ ಅನ್ಯೋನ್ಯವಾಗಿದ್ದಾರೆ. ಯಾರಿಗೆ ಟಿಕೆಟ್ ಕೊಟ್ಟರೂ ಹೊಂದಾಣಿಕೆಯಿಂದ ಕೆಲಸ ಮಾಡುತ್ತಾರೆ.

ಚಾಮರಾಜನಗರ ಕ್ಷೇತ್ರದ ಟಿಕೆಟ್ ವಿಚಾರದಲ್ಲಿ ನನ್ನ ವೈಯುಕ್ತಿಕ ಅಭಿಪ್ರಾಯವನ್ನು ವಿಜಯೇಂದ್ರ ಅವರಿಗೆ ಹೇಳಿದ್ದೇನೆ. ನಾನು ಯಾರ ಮೇಲು ಪ್ರಭಾವ ಬೀರಲ್ಲ. ಸ್ಥಳೀಯವಾಗಿ ಸಮೀಕ್ಷೆ ಮಾಡಿ ಕ್ಷೇತ್ರದ ಮುಖಂಡರ ಜತೆ ಮಾತುಕತೆ ಮಾಡಿ ಅಭ್ಯರ್ಥಿ ಯಾರಾಗಬೇಕೆಂದು ನಿರ್ಧಾರ ಮಾಡುತ್ತಾರೆ. ಇದು ಇಲ್ಲಿ ಚರ್ಚೆ ಮಾಡಲಿಕ್ಕೆ ಮುನಿಸಿಪಾಲಿಟಿ ಚುನಾವಣೆ ಅಲ್ಲ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net