

ಬೆಂಗಳೂರು: ಪ್ರೀತಿಸುತ್ತಿದ್ದ ವಿದ್ಯಾರ್ಥಿ-ವಿದ್ಯಾರ್ಥಿನಿ ಇಬ್ಬರೂ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು, ಪ್ರೀತಿಯೊಂದು ರೈಲ್ವೇ ಹಳಿಯಲ್ಲಿ ಅಂತ್ಯಗೊಂಡಿದೆ. ಸಾವಿಗೀಡಾದ ಇಬ್ಬರೂ ಬೆಂಗಳೂರಿನ ಕಾಲೇಜೊಂದರ ವಿದ್ಯಾರ್ಥಿಗಳು.
ಚೈತನ್ಯ (19) ಮತ್ತು ಸಿರೀಶ್ (20) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು. ಇವರು ಬೆಂಗಳೂರಿನ ಈಸ್ಟ್ ಪಾಯಿಂಟ್ ಕಾಲೇಜಿನಲ್ಲಿ ಬಿಸಿಎ ವಿದ್ಯಾಭ್ಯಾಸ ಮಾಡುತ್ತಿದ್ದರು. ಆತ್ಮಹತ್ಯೆಗೆ ಕಾರಣ ಏನು ಹಾಗೂ ವಿದ್ಯಾರ್ಥಿಗಳು ಎಲ್ಲಿಯವರು ಎಂಬ ಕುರಿತು ನಿಖರವಾದ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.
ಹೊರಮಾವು ಬಳಿಯ ರೈಲ್ವೆ ಬ್ರಿಡ್ಜ್ ಬಳಿ ಟ್ರ್ಯಾಕ್ಗೆ ತಲೆ ಕೊಟ್ಟಿದ್ದಾರೆ. ಪರಿಣಾಮವಾಗಿ ಇಬ್ಬರೂ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಬೈಯಪ್ಪನಹಳ್ಳಿ ರೈಲ್ವೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶವಗಳನ್ನು ಮರಣೋತ್ತರ ಪರೀಕ್ಷೆಗೆ ಸರ್ ಸಿ.ವಿ.ರಾಮನ್ ಆಸ್ಪತ್ರೆಗೆ ರವಾನಿಸಲಾಗಿದೆ.