ಇಬ್ಬರು ವಿದ್ಯಾರ್ಥಿನಿಯರು ಆತ್ಮಹತ್ಯೆ

10-hvr-06 vaishanvi ritti
Published on

ಹಾವೇರಿ: ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಜಿಲ್ಲೆಯಲ್ಲಿ ಕಡಿಮೆ ಅಂಕ ಹಾಗೂ ಗಣಿತ ವಿಷಯದಲ್ಲಿ ಅನುತ್ತೀರ್ಣವಾಗಿದ್ದಕ್ಕೆ ಮನನೊಂದು ಇಬ್ಬರು ಬಾಲಕಿಯರು ಆತ್ಮಹತ್ಯೆಗೆ ಶರಣಾಗಿರುವ ಆಘಾತಕಾರಿ ಘಟನೆ ನಡೆದಿದೆ.

ಎಸ್ಸೆಸ್ಸೆಲ್ಸಿ ಪರೀಕ್ಷೆಯ ಗಣಿತ ವಿಷಯದಲ್ಲಿ 18 ಅಂಕ ಪಡೆದು ಅನುತ್ತೀರ್ಣಗೊಂಡ ನಗರದ ಗೆಳೆಯರ ಬಳಗದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ, ಧ್ಯಾಮವ್ವನ ಗುಡಿ ಓಣಿಯ ನಿವಾಸಿ ವೈಷ್ಣವಿ ರಿತ್ತಿ (16) ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಬ್ಯಾಡಗಿ ತಾಲೂಕು ಕಾಶಂಬಿ ಗ್ರಾಮದ ಬಾಲಕಿ ಭಾರತಿ ಕೋಟಿ (16) ಎಸ್ಸೆಸ್ಸೆಲ್ಸಿಯಲ್ಲಿ ಶೇ. 64ರಷ್ಟು ಅಂಕಗಳಿಸಿದ್ದರೂ ಕಡಿಮೆ ಫಲಿತಾಂಶ ಬಂದಿದೆ ಎಂದು ಮನನೊಂದ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈ ಬಾಲಕಿ ಕಾಗಿನೆಲೆ ಗ್ರಾಮದ ಕನಕದಾಸ ಪ್ರೌಢಶಾಲೆಯಲ್ಲಿ ಅಭ್ಯಾಸ ಮಾಡುತ್ತಿದ್ದಳು.

ಘಟನಾ ಸ್ಥಳಕ್ಕೆ ಶಾಸಕ ನೆಹರು ಓಲೇಕಾರ, ಡಿಡಿಪಿಐ ಅಂದಾನೆಪ್ಪ ವಡಗೇರಿ, ಬಿಇಒ ಎಂ.ಎಚ್. ಪಾಟೀಲ ಭೇಟಿ ನೀಡಿ ಪಾಲಕರಿಗೆ ಸಾಂತ್ವನ ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net