ಶಾಲೆಯಿಂದ ಮನೆಗೆ ಹೊರಟಿದ್ದ ಮಕ್ಕಳಿಗೆ ಕಾರು ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು, ಮೂವರಿಗೆ ಗಂಭೀರ ಗಾಯ..

Car
ವಿದ್ಯಾರ್ಥಿನಿಯರಿಬ್ಬರನ್ನು ಬಲಿ ಪಡೆದ ಕಾರು, ಸ್ಥಳದಲ್ಲಿ ಜಮಾಯಿಸಿರುವ ಜನರು.
Published on

ಬಾಗಲಕೋಟೆ: ಶಾಲೆಯಿಂದ ಮನೆಗೆ ಹೊರಟಿದ್ದ ವಿದ್ಯಾರ್ಥಿಗಳಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮವಾಗಿ ಇಬ್ಬರು ಸ್ಥಳದಲ್ಲೇ ಸಾವಿಗೀಡಾದರೆ, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಐಹೊಳೆ ಸಮೀಪದ ಕ್ಯಾದಿಗೇರಿ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದೆ. ತರಗತಿ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದ ವಿದ್ಯಾರ್ಥಿಗಳಿಗೆ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದು ಈ ಅವಘಡ ಉಂಟಾಗಿದೆ. ಈ ಅಪಘಾತದಲ್ಲಿ ವಿದ್ಯಾರ್ಥಿನಿಯರಾದ ನೇತ್ರಾವತಿ ರಗಟಿ ‌‌(14), ಅಂಜಲಿ ಸೂಡಿ (14) ಸಾವಿಗೀಡಾಗಿದ್ದಾರೆ. ಗಾಯಗೊಂಡ ವಿದ್ಯಾರ್ಥಿಗಳನ್ನ ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಮಕ್ಕಳು ಐಹೊಳೆಯಿಂದ ಚಿಲ್ಲಾಪುರಕ್ಕೆ ಹೊರಟಿದ್ದರು. ಆಗ ಎದುರಿನಿಂದ ವೇಗವಾಗಿ ಬರುತ್ತಿದ್ದ ಕಾರು ಈ ದುರಂತಕ್ಕೆ ಕಾರಣವಾಗಿದೆ. ಕೆಎ 29 ಎನ್ 9146 ನೋಂದಣಿ ಸಂಖ್ಯೆಯ ಈ ಕಾರು ಸಂತೋಷ ಅಮರಿ ಎಂಬವರ ಹೆಸರಿನಲ್ಲಿದೆ.

ಅಪಘಾತದ ಬಳಿಕ ಕಾರು ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಅಮೀನಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಐಹೊಳೆ ಪ್ರವಾಸದಲ್ಲಿರುವ ತೋಟಗಾರಿಕೆ ಸಚಿವ ಮುನಿರತ್ನ ಕೂಡ ಸ್ಥಳಕ್ಕೆ ತೆರಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net