ಇಬ್ಬರು ವಿದ್ಯಾರ್ಥಿಗಳು ಕಲ್ಲು ಕ್ವಾರಿಯಲ್ಲಿ ಮುಳುಗಿ ಸಾವು

WhatsApp Image 2024-06-17 at 5.34.55 PM
Published on

ವಿಜಯವಾಣಿ ಸುದ್ದಿಜಾಲ ಧಾರವಾಡ: ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ನಗರ ಹೊರವಲಯದ ಕಲ್ಲು ಕ್ವಾರಿಯಲ್ಲಿ ಸೋಮವಾರ ನಡೆದಿದೆ. ಮಾಳಮಡ್ಡಿಯ ಶ್ರೇಯಸ್ ನವಲೆ (16) ಹಾಗೂ ಜಯನಗರದ ಧ್ರುವ ದಾಸರ (16) ಮೃತ ವಿದ್ಯಾರ್ಥಿಗಳು. ನಗರದ ಖಾಸಗಿ ಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದ 6 ವಿದ್ಯಾರ್ಥಿಗಳು ಮನಸೂರು ಗ್ರಾಮ ವ್ಯಾಪ್ತಿಯ ಕಲ್ಲು ಕ್ವಾರಿಗೆ ಈಜಲು ಹೋಗಿದ್ದರು. ಈ ವೇಳೆ ನೀರಿಗೆ ಇಳಿದಿದ್ದ ಶ್ರೇಯಸ್ ಮತ್ತು ಧ್ರುವ ಈಜಲು ಬಾರದೆ ಮುಳುಗಿ ಮೃತಪಟ್ಟಿದ್ದಾರೆ. ಇನ್ನುಳಿದ ನಾಲ್ವರ ಚೀರಾಟ ಕೇಳಿ ಅಕ್ಕಪಕ್ಕದ ಜಮೀನುಗಳಲ್ಲಿನ ಜನ ಸ್ಥಳಕ್ಕೆ ದೌಡಾಯಿಸಿ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದರು.
ಜಿಲ್ಲಾ ಅಗ್ನಿಶಾಮಕ ಅಽಕಾರಿ ಗೋವಿಂದ ತೋರಣಗಟ್ಟಿ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಶ್ರೇಯಸ್ ನವಲೆ ಮೃತದೇಹ ಹೊರತೆಗೆದಿದೆ. ಧ್ರುವ ಮೃತದೇಹ ಪತ್ತೆಗಾಗಿ ಕಾರ್ಯಾಚರಣೆ ನಡೆಸಲಾಗಿದೆ. ಸ್ಥಳಕ್ಕೆ ಗ್ರಾಮೀಣ ಸಿಪಿಐ ಶಿವಾನಂದ ಕಮತಗಿ ಹಾಗೂ ಪೊಲೀಸ್ ಸಿಬ್ಬಂದಿ ಸ್ಥಳದಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net