ಅ೦ತಾರಾಜ್ಯ ಇಬ್ಬರು ಕಳ್ಳರ ಬಂಧನ

24 Dwd 5
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಬಸ್ ನಿಲ್ದಾಣಗಳಲ್ಲಿ ಮಹಿಳೆಯರ ವ್ಯಾನಿಟಿ ಬ್ಯಾಗ್‌ನಲ್ಲಿದ್ದ ಚಿನ್ನಾಭರಣ ಕಳ್ಳತನ ಮಾಡುತ್ತಿದ್ದ ಮಹಿಳೆ ಹಾಗೂ ಮನೆಗಳಲ್ಲಿ ಕಳ್ಳತನ ಮಾಡುತ್ತಿದ್ದ ವ್ಯಕ್ತಿಯನ್ನು ಉಪನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶದ ದಕ್ಷಿಣ ಗೋದಾವರಿಯ ಕಾಮೇಪಲ್ಲಿ ಶ್ರೀನಿವಾಸ ಹಾಗೂ ಆಂಧ್ರಪ್ರದೇಶದ ಚಿತ್ತೂರ ತಾಲೂಕಿನ ಲಕ್ಷ್ಮೀಪುರದ ಗುನಾ ಮಿನಾಚಿ ಸಕ್ತಿ ಬಂಽತರು. ಕಾಮೇಪಲ್ಲಿ ಶ್ರೀನಿವಾಸ ಹಗಲು ವೇಳೆ ಮನೆಗಳಿಗೆ ನುಗ್ಗಿ ಕಳ್ಳತನ ಮಾಡುತ್ತಿದ್ದ. ಗುನಾ ಮಿನಾಚಿ ಸಕ್ತಿ ವ್ಯಾನಿಟಿ ಬ್ಯಾಗ್‌ನಲ್ಲಿ ಚಿನ್ನಾಭರಣ ಇಟ್ಟು ಸಂಚರಿಸುವ ಮಹಿಳೆಯರ ಬೆನ್ನು ಹತ್ತಿ ಬಸ್ ನಿಲ್ದಾಣಗಳಲ್ಲಿ ಕದಿಯುತ್ತಿದ್ದಳು. ಉಪನಗರ ಠಾಣೆ ವ್ಯಾಪ್ತಿಯಲ್ಲಿ 2 ಹಾಗೂ ಹುಬ್ಬಳ್ಳಿಯ ಗೋಕುಲ ರಸ್ತೆ ಠಾಣೆ ವ್ಯಾಪ್ತಿಯಲ್ಲಿ 1 ಪ್ರಕರಣ ದಾಖಲಾಗಿತ್ತು.

ಆರೋಪಿಗಳ ಪತ್ತೆಗೆ ಎಸಿಪಿ ಪ್ರಶಾಂತ ಸಿದ್ದನಗೌಡರ ಮಾರ್ಗದರ್ಶನದಲ್ಲಿ ಇನ್‌ಸ್ಪೆಕ್ಟರ್ ದಯಾನಂದ ಶೇಗುಣಸಿ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು. ಕಾರ್ಯಾಚರಣೆ ನಡೆಸಿದ ಪೊಲೀಸರು ಇಬ್ಬರನ್ನು ಬಂಽಸಿದ್ದು, 9.25 ಲಕ್ಷ ಮೌಲ್ಯದ ಚಿನ್ನಾಭರಣ, 250 ಗ್ರಾಂ ಬೆಳ್ಳಿಯ ಆಭರಣ ವಶಪಡಿಸಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net