ಯಗಚಿ ಜಲಾಶಯದಿಂದ 2 ಸಾವಿರ ಕ್ಯೂಸೆಕ್ ನದಿಗೆ

26blrp7
Published on

ಬೇಲೂರು: ತಾಲೂಕು ಹಾಗೂ ಯಗಚಿ ಜಲಾನಯನ ಪ್ರದೇಶದಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಗೆ ಸಮೀಪದ ಯಗಚಿ ಜಲಾಶಯಕ್ಕೆ ಒಳ ಹರಿವು ಹೆಚ್ಚಾಗಿದೆ. ಹಾಗಾಗಿ ಜಲಾಶಯದ 5 ಕ್ರೆಸ್ಟ್ ಗೇಟ್‌ಗಳ ಮೂಲಕ ನದಿಗೆ ಶುಕ್ರವಾರ 2 ಸಾವಿರ ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ.


ನಿರಂತರ ಮಳೆಯಿಂದ ಶಾಲೆಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. ಹಳ್ಳ-ಕೊಳ್ಳಗಳು, ಕೆರೆ-ಕಟ್ಟೆಗಳು ತುಂಬಿ ಯಗಚಿ ಜಲಾಶಯಕ್ಕೆ ಹೆಚ್ಚು ನೀರು ಹರಿದು ಬರುತ್ತಿರುವುದರಿಂದ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಜಲಾಶಯಕ್ಕೆ 2 ಸಾವಿರ ಕ್ಯೂಸೆಕ್ ಒಳಹರಿವಿದೆ. ಇದರಲ್ಲಿ ಬರುತ್ತಿರುವ 2 ಸಾವಿರ ಕ್ಯೂಸೆಕ್ ನೀರನ್ನು ಜಲಾಶಯದ 5 ಕ್ರೆಸ್ಟ್ ಗೇಟ್‌ಗಳ ಮೂಲಕ ನದಿಗೆ ಬಿಡಲಾಗುತ್ತಿದೆ. ನದಿ ಪಾತ್ರದ ಗ್ರಾಮಸ್ಥರು ಎಚ್ಚರಿಕೆ ವಹಿಸಬೇಕಿದೆ. ಜಲಾಶಯದ ಗೇಟ್‌ಗಳಿಂದ ನೀರು ಬಿಟ್ಟಿರುವುದನ್ನು ನೋಡಲು ಸ್ಥಳೀಯರು ಮತ್ತು ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net