

ಮಂಗಳೂರು: ಎರಡು ಪ್ರತ್ಯೇಕ ಚೆಕ್ ಬೌನ್ಸ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಉಡುಪಿಯ ಇಬ್ಬರು ಉದ್ಯಮಿಗಳಿಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಮಂಗಳೂರಿನ 9ನೇ ಜೆಎಂಎ್ಸಿ ನ್ಯಾಯಾಲಯ ತೀರ್ಪು ನೀಡಿದೆ.
ಎರಡೂ ಪ್ರಕರಣಗಳನ್ನು ಕೇವಲ ಒಂದೇ ವರ್ಷದಲ್ಲಿ ವಿಚಾರಣೆ ನಡೆಸಲಾಗಿದ್ದು, ನ್ಯಾಯಾಲಯದ ನ್ಯಾಯಾಧೀಶರಾದ ಡಾ.ಶಿಲ್ಪಾ ಬ್ಯಾಡಗಿ ಅವರು ತೀರ್ಪು ನೀಡಿದ್ದಾರೆ.
ಪ್ರಕರಣಗಳ ವಿವರ: ಉಡುಪಿಯ ಪ್ರಕಾಶ್ ಆಚಾರ್ಯ ಮಾಲೀಕತ್ವದ ವಿಶ್ವ ಕನ್ಸ್‌ಟ್ರಕ್ಷನ್ ಸಂಸ್ಥೆಯು ಮಂಗಳೂರಿನ ಕೆನ್ ಎಂಟರ್‌ಪ್ರೈಸಸ್ ಅವರಿಂದ ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದ ಸಾಮಗ್ರಿಗಳನ್ನು ಪಡೆದುಕೊಂಡಿತ್ತು. ಈ ಸಾಮಗ್ರಿಗಳಿಗೆ ಸಂಬಂಧಿಸಿದಂತೆ ಬಾಡಿಗೆ ಹಾಗೂ ಇತರ ಮೊತ್ತವನ್ನು ಪಾವತಿಸುವಲ್ಲಿ ವಿಲವಾಗಿತ್ತು. ಈ ಬಗ್ಗೆ ಸಾಕಷ್ಟು ಬಾರಿ ಹಣದ ಬೇಡಿಕೆ ಇಟ್ಟಿದ್ದರೂ ಹಣ ನೀಡದ ಹಿನ್ನೆಲೆಯಲ್ಲಿ ಭದ್ರತೆಗಾಗಿ ನೀಡಿದ್ದ ಚೆಕ್ಕನ್ನು ನಗದೀಕರಣಕ್ಕೆ ಬ್ಯಾಂಕಿಗೆ ಹಾಜರುಪಡಿಸಲಾಯಿತು. ಚೆಕ್ ಅಮಾನ್ಯಗೊಂಡ ಕಾರಣ, ಮಂಗಳೂರಿನ 9ನೇ ಜೆಎಂಎ್ಸಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿತ್ತು.
2024ರ ೆಬ್ರವರಿಯಲ್ಲಿ ದಾಖಲಾದ ಪ್ರಕರಣವನ್ನು ಕ್ಷಿಪ್ರ ಗತಿಯ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗೆ 14.40 ಲಕ್ಷ ರೂ. ದಂಡ ಪಾವತಿಸುವಂತೆ ಆದೇಶ ಹೊರಡಿಸಿದೆ. ದಂಡದ ಮೊತ್ತ ಪಾವತಿಸುವಲ್ಲಿ ವಿಲರಾದರೆ, 6 ತಿಂಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ದಂಡದ ಮೊತ್ತದಲ್ಲಿ 14.35 ಲಕ್ಷವನ್ನು ದೂರುದಾರರಿಗೆ ನೀಡಬೇಕು. ಜೈಲು ಶಿಕ್ಷೆ ಅನುಭವಿಸಿದರೂ ದೂರುದಾರರಿಗೆ ಪರಿಹಾರ ನೀಡುವ ಬಾಧ್ಯತೆಯಿಂದ ಮುಕ್ತರಾಗುವುದಿಲ್ಲ ಎಂದು ತೀರ್ಪಿನಲ್ಲಿ ಸ್ಪಷ್ಟಪಡಿಸಲಾಗಿದೆ.
ಇನ್ನೊಂದು ಪ್ರಕರಣದಲ್ಲಿ ಉಡುಪಿಯ ರವಿ ಕುಮಾರ್ ಎಂಬವರು ಮಂಗಳೂರಿನ ಕೆನ್ ಎಂಟರ್‌ಪ್ರ್ತ್ರೈಸಸ್‌ನಿಂದ ಕಟ್ಟಡ ನಿರ್ಮಾಣದ ಸಾಮಗ್ರಿ ಪಡೆದುಕೊಂಡು, ಅದರ ಮೊತ್ತವನ್ನು ಪಾವತಿಸಿರಲಿಲ್ಲ. ಆ ಚೆಕ್ ಕೂಡಾ ಅಮಾನ್ಯಗೊಂಡಿತ್ತು.
ಕೆನ್ ಸಂಸ್ಥೆಯ ಮಾಲೀಕರು ರವಿ ಕುಮಾರ್ ಅವರ ವಿರುದ್ಧ 9ನೇ ಜೆಎಂಎ್ಸಿ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. ಒಂದೇ ವರ್ಷದೊಳಗೆ ಪ್ರಕರಣವನ್ನು ಇತ್ಯರ್ಥ ಮಾಡಿದ ನ್ಯಾಯಾಲಯ, ಆರೋಪಿಗೆ 4.05 ಲಕ್ಷ ರೂ. ದಂಡ ವಿಧಿಸಿದೆ. ದಂಡ ವಿಧಿಸಲು ವಿಲರಾದರೆ 4 ತಿಂಗಳು ಜೈಲು ಶಿಕ್ಷೆಯನ್ನು ವಿಧಿಸಿದೆ. ದಂಡದ ಮೊತ್ತದಲ್ಲಿ 4 ಲಕ್ಷ ರೂ.ಗಳನ್ನು ದೂರುದಾರರಿಗೆ ಪರಿಹಾರವಾಗಿ ನೀಡಲು ಆದೇಶಿಸಲಾಗಿದೆ.
ಎರಡೂ ಪ್ರಕರಣಗಳಲ್ಲಿ ದೂರುದಾರರ ಪರವಾಗಿ ಮಂಗಳೂರಿನ ವಕೀಲರಾದ ಸುಕೇಶ್ ಕುಮಾರ್ ಶೆಟ್ಟಿ ವಾದಿಸಿದ್ದರು.