

ಬೆಳಗಾವಿ: ಜಿಲ್ಲೆಯಲ್ಲಿ ಕರೊನಾ ಸೋಂಕಿತರ ಪೈಕಿ ಇಬ್ಬರು ಮಹಿಳೆಯರು ಸಂಪೂರ್ಣ ಗುಣಮುಖರಾಗಿದ್ದು, ಅವರನ್ನು ಗುರುವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ (ಬಿಮ್ಸ್) ನಿರ್ದೇಶಕ ಡಾ.ವಿನಯ ದಾಸ್ತಿಕೊಪ್ಪ ತಿಳಿಸಿದ್ದಾರೆ.
ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಯಬಾಗ ತಾಲೂಕಿನ ಕುಡಚಿ ಪಟ್ಟಣದ 67 ವರ್ಷದ (ಪಿ-149) ಮತ್ತು 36 ವರ್ಷದ (ಪಿ-147) ಮಹಿಳೆಯರು ಕ್ರಮವಾಗಿ ಏ.1 ಮತ್ತು ಮಾರ್ಚ್ 31ರಂದು ಆಸ್ಪತ್ರೆಯಲ್ಲಿ ದಾಖಲಾಗಿದ್ದರು. 28 ದಿನಗಳ ವರೆಗೆ ನಿರಂತರ ಚಿಕಿತ್ಸೆಯಿಂದ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಕರೊನಾ ಸೋಂಕು ತಗುಲಿರುವ 69 ಜನರಲ್ಲಿ ಒಟ್ಟು 10 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಡಾ.ದಾಸ್ತಿಕೊಪ್ಪ ತಿಳಿಸಿದ್ದಾರೆ.