ಗೌರವ ಸಮರ್ಪಣೆಗೆ ಸದಾವಕಾಶ

tyamgodlu program
Published on

ವಿಜಯವಾಣಿ ಸುದ್ದಿಜಾಲ ತ್ಯಾಮಗೊಂಡ್ಲು
ಪಟ್ಟಣದಲ್ಲಿ ಗ್ರಾಪಂನಿಂದ ಆಯೋಜಿಸಿದ್ದ ಸ್ವಾತಂತ್ರ್ಯ ದಿನದಲ್ಲಿ ಸರ್ಕಾರಿ ಮತ್ತು ಖಾಸಗಿ ಶಾಲಾ ವಿದ್ಯಾರ್ಥಿಗಳು ನಡೆಸಿಕೊಟ್ಟ ಸಾಂಸ್ಕೃತಿಕ ಕಾರ್ಯಕ್ರಮ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.
ಗ್ರಾಪಂ ಅಧ್ಯಕ್ಷ ಟಿ.ಎಚ್.ಮಲ್ಲೇಶ್ ಮಾತನಾಡಿ, ದೇಶದ ಸ್ವಾತಂತ್ರ್ಯಕ್ಕಾಗಿ ವೈಯಕ್ತಿಕ ಆಸೆ, ಆಕಾಂಕ್ಷೆಗಳನ್ನು ಬದಿಗೊತ್ತಿ ದೇಶಕ್ಕಾಗಿ ಪ್ರಾಣತೆತ್ತು ಹುತಾತ್ಮರಾದ ಸಾವಿರಾರು ಹೋರಾಟಗಾರರನ್ನು ನೆನಪಿಸಿಕೊಂಡು ಗೌರವ ಸಮರ್ಪಿಸಲು ಇದೊಂದು ಸದಾವಕಾಶ. ಮಹನೀಯರು ಅಂದು ಅನುಭವಿಸಿದ ಯಾತನೆ, ನೋವು, ಸಂಕಟ, ಸಂಘಟನೆಯ ವಿಧಾನಗಳನ್ನು ಮಕ್ಕಳಿಗೆ ಮತ್ತು ಜನಸಾಮಾನ್ಯರಿಗೆ ತಿಳಿಸಿಕೊಡುವ ಕೆಲಸವಾಗಬೇಕಿದೆ ಎಂದರು.
ಗ್ರಾಪಂ ವ್ಯಾಪ್ತಿಯ ಎಲ್ಲ ಶಾಲಾ ಮುಖ್ಯಸ್ಥರು, ಇತ್ತೀಚೆಗೆ ನಿವೃತ್ತಿ ಹೊಂದಿದ ಸರ್ಕಾರಿ ಅಧಿಕಾರಿಗಳು, ವಿವಿಧ ಕ್ಷೇತ್ರ ಸಾಧಕರು, ಹಾಗೂ 2022-23ನೇ ಸಾಲಿನಲ್ಲಿ ಅತಿ ಹೆಚ್ಚು ಅಂಕಗಳಿಸಿರುವ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ನೆನಪಿನ ಕಾಣಿಕೆ ನೀಡಲಾಯಿತು.
ವಿದ್ಯಾರ್ಥಿಗಳಿಂದ ಗ್ರಾಮದಲ್ಲಿ ಪಥಸಂಚಲನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಗ್ರಾಮ ಪಂಚಾಯಿತಿ ಸದಸ್ಯರಾದ ಸುಜಿತ್, ವಾಸಿಮ್, ತಾಲಿಬ್, ವಾಸುದೇವ್, ಪ್ರಭಾರಿ ಪಿಡಿಒ ಗಿರೀಶ್‌ಕುಮಾರ್, ಕಾರ್ಯದರ್ಶಿ ನಾಗರತ್ನಮ್ಮ, ಮುಖಂಡರಾದ ಟಿ.ಎನ್.ಹನುಮಂತರಾಜು, ಶಂಕರಪ್ಪ, ಟಿ.ಎಸ್.ಮಂಜುನಾಥ್, ಸಾದತ್‌ಉಲ್ಲಾ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net