ಬೆರಳಚ್ಚು- ಶೀಘ್ರಲಿಪಿ ಪರೀಕ್ಷೆ 22ರಂದು

Vijayavani-Featured-Image
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಶಾಲಾ ಶಿಕ್ಷಣ ಇಲಾಖೆಯ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸುವ ಬೆರಳಚ್ಚು (ಟೈಪಿಂಗ್​) ಹಾಗೂ ಶೀಘ್ರಲಿಪಿ (ಶಾರ್ಟ್​ಹ್ಯಾಂಡ್​) ಪರೀಕ್ಷೆಗಳು ಜು. 22ರಿಂದ ಜು. 31ರವರೆಗೆ ನಡೆಯಲಿವೆ. ಕನ್ನಡ ಮತ್ತು ಆಂಗ್ಲ ಭಾಷೆಯ ಬೆರಳಚ್ಚು ಮತ್ತು ಶೀಘ್ರಲಿಪಿ ಪರೀಕ್ಷೆಗಳನ್ನು ವ್ಯವಸ್ಥಿತವಾಗಿ ಜರುಗಿಸಲು ಸೂಚನೆ ನೀಡಿ, ವೇಳಾಪಟ್ಟಿಯನ್ನು ಅಧಿಕೃತಗೊಳಿಸಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಿರ್ದೇಶಕ ಎಚ್​.ಎನ್​. ಗೋಪಾಲಕೃಷ್ಣ ಆದೇಶ ಹೊರಡಿಸಿದ್ದಾರೆ.
ಅಭ್ಯರ್ಥಿಗಳು ಜಿಲ್ಲಾ ವ್ಯಾಪ್ತಿಯ ಕನ್ನಡ, ಆಂಗ್ಲ ಭಾಷೆಯ ಪರೀಕ್ಷೆಗಳ ಸಮಗ್ರ ಮಾಹಿತಿಗೆ ನಗರದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್​) ಅಥವಾ ಅನ್ನರ್ಪೂಣ ಇನ್​ಸ್ಟಿಟ್ಯೂಟ್​ ಆಫ್ ಕಾಮರ್ಸ್​, ನವನಗರ ಹುಬ್ಬಳ್ಳಿ ಕಚೇರಿಗೆ ಭೇಟಿ ನೀಡಬಹುದು ಎಂದು ಅನಿಲ ಉಳ್ಳಾಗಡ್ಡಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net