

ಉಪ್ಪಿನಂಗಡಿ: ಜಿಲ್ಲೆಯ ರೈತಾಪಿ ವರ್ಗದ ಬದುಕಿನೊಂದಿಗೆ ನಂಟು ಹೊಂದಿರುವ ಕಂಬಳ ಕ್ರೀಡೆಗೆ ಸರ್ಕಾರದಿಂದ ದೊರಕಬೇಕಾದ ಸಹಾಯಧನ ದೊರಕಿಸುವುದಲ್ಲದೆ, ಹೆಚ್ಚುವರಿ ಪ್ರೋತ್ಸಾಹ ಒದಗಿಸಲು ಶ್ರಮಿಸುತ್ತಿದ್ದೇನೆ. ತುಳುನಾಡಿನಲ್ಲಿ ಪ್ರವಾಸೋದ್ಯಮಕ್ಕೆ ವಿಫುಲ ಅವಕಾಶಗಳಿದ್ದು, ಅಭಿವೃದ್ಧಿಯ ಕೊರತೆಯಿಂದ ಅಲ್ಲಿಗೆ ಜನರನ್ನು ಸೆಳೆಯಲು ಸಾಧ್ಯವಾಗುತ್ತಿಲ್ಲ ಎಂದು ಉಪ್ಪಿನಂಗಡಿ ಕಂಬಳ ಸಮಿತಿ ಅಧ್ಯಕ್ಷ, ಶಾಸಕ ಅಶೋಕ್ ಕುಮಾರ್ ರೈ ಕರೆ ಹೇಳಿದರು.
ಕೂಟೇಲುವಿನ ದಡ್ಡು ಬಳಿಯ ನೇತ್ರಾವತಿ ನದಿ ಕಿನಾರೆಯಲ್ಲಿ ಶನಿವಾರ ಆರಂಭಗೊಂಡ ಉಬಾರ್ ಕಂಬಳೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.
ಉದ್ಯಮಿ ನಟೇಶ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಧಾರ್ಮಿಕ ಪರಿಷತ್ನ ಸದಸ್ಯೆ ಮಲ್ಲಿಕಾ ಶೆಟ್ಟಿ ಮಲಾರುಬೀಡು ಮಾತನಾಡಿದರು. ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಧಾಕೃಷ್ಣ ನಾಕ್, ಉದ್ಯಮಿ ಧನ್ಯಕುಮಾರ್ ರೈ ಬಿಳಿಯೂರುಗುತ್ತು, ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ರವೀಂದ್ರ ಶೆಟ್ಟಿ ನುಳಿಯಾಲು, ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ, ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಕರುಣಾಕರ ಸುವರ್ಣ, ಉಪ್ಪಿನಂಗಡಿ ಪೊಲೀಸ್ ಉಪ ನಿರೀಕ್ಷಕ ಅವಿನಾಶ್ ಎಚ್.ಗೌಡ ಶುಭಹಾರೈಸಿದರು.
ಉಪ್ಪಿನಂಗಡಿ ಗ್ರಾಪಂ ಅಧ್ಯಕ್ಷೆ ಲಲಿತಾ, ಪ್ರವೀಣ್ ಕುಮಾರ್ ಕದಿಕ್ಕಾರು ಬೀಡು, ರಾಜೇಶ್ ಶೆಟ್ಟಿ, ಶ್ರೀ ಮಹಿಷಮರ್ದಿನಿ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ಸಂಕಪ್ಪ ಶೆಟ್ಟಿ, ಕಾಂಗ್ರೆಸ್ ನಗರಾಧ್ಯಕ್ಷ ಕೃಷ್ಣಪ್ರಸಾದ್ ಆಳ್ವ, ಉಪ್ಪಿನಂಗಡಿ ಗ್ರಾಪಂ ಉಪಾಧ್ಯಕ್ಷೆ ವಿದ್ಯಾಲಕ್ಷ್ಮೀ ಪ್ರಭು, ಕಂಬಳ ಸಮಿತಿ ಗೌರವಾಧ್ಯಕ್ಷ ಎನ್.ಉಮೇಶ್ ಶೆಣೈ, ಪ್ರಧಾನ ಕಾರ್ಯದರ್ಶಿ ಕೇಶವ ಭಂಡಾರಿ ಬೆಳ್ಳಿಪ್ಪಾಡಿ ಕೈಪ, ಕೋಶಾಧಿಕಾರಿ ಸೀತಾರಾಮ ಶೆಟ್ಟಿ ಹೆಗ್ಡೆಹಿತ್ಲು, ಉಪಾಧ್ಯಕ್ಷ ವಿದ್ಯಾಧರ ಜೈನ್ ಪದ್ಮವಿದ್ಯಾ, ಮುರಳೀಧರ ರೈ ಮಠಂತಬೆಟ್ಟು, ರಾಮಚಂದ್ರ ಮಣಿಯಾಣಿ, ಸುದೇಶ್ ಶೆಟ್ಟಿ ಶಾಂತಿನಗರ, ಜಗನ್ನಾಥ ಶೆಟ್ಟಿ ನಡುಮನೆ, ಮೋನಪ್ಪ ಗೌಡ ಪಮ್ಮನಮಜಲು, ಕಾರ್ಯದರ್ಶಿಗಳಾದ ಶಿವರಾಮ ಶೆಟ್ಟಿ ಕರಾಯ, ಚಂದ್ರಶೇಖರ ಮಡಿವಾಳ, ಜತೆಕಾರ್ಯದರ್ಶಿ ವಿಶ್ವನಾಥ ಶೆಟ್ಟಿ ಕಂಗ್ವೆ, ಸಂಘಟನಾ ಕಾರ್ಯದರ್ಶಿಗಳಾದ ಯೋಗೀಶ್ ಎಸ್.ಸಾಮಾನಿ ಸಂಪಿಗೆದಡಿ ಮಠಂತಬೆಟ್ಟು, ಕೃಷ್ಣಪ್ರಸಾದ್ ಬೊಳ್ಳಾವು, ದಿಲೀಪ್ ಶೆಟ್ಟಿ ಕರಾಯ, ವಿಜಯ ಪೂಜಾರಿ, ಸಹ ಸಂಚಾಲಕರಾದ ಜಯಪ್ರಕಾಶ್ ಬದಿನಾರು, ಕುಮಾರನಾಥ ಪಲ್ಲತ್ತಾರು, ಪಶುವೈದ್ಯಾಧಿಕಾರಿ ಡಾ.ಧರ್ಮಪಾಲ್, ಪ್ರಮುಖರಾದ ಅನಿ ಮಿನೇಜಸ್, ನಝೀರ್ ಮಠ, ವಿಕ್ರಂ ಶೆಟ್ಟಿ ಅಂತರ, ಕೃಷ್ಣ ಜಿ. ರಾವ್ ಆರ್ತಿಲ, ಸಂದೀಪ್ ಕುಪ್ಟೆಟ್ಟಿ, ರೂಪೇಶ್ ರೈ ಅಲಿಮಾರ್ ಮತ್ತಿತರರು ಉಪಸ್ಥಿತರಿದ್ದರು. ಸಮಿತಿ ಕಾರ್ಯಾಧ್ಯಕ್ಷ ಅಶೋಕ್ ಕುಮಾರ್ ರೈ ಅರ್ಪಿಣಿಗುತ್ತು ಸ್ವಾಗತಿಸಿದರು. ನಿಹಾಲ್ ಶೆಟ್ಟಿ ವಂದಿಸಿದರು. ಕಂಬಳ ಸಮಿತಿ ಗೌರವ ಸಲಹೆಗಾರ ನಿರಂಜನ ರೈ ಮಠಂತಬೆಟ್ಟು ಕಾರ್ಯಕ್ರಮ ನಿರೂಪಿಸಿದರು.
ಆಕರ್ಷಕ ಮೆರವಣಿಗೆ
ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ-ಮಹಾಕಾಳಿ ದೇವಸ್ಥಾನದಿಂದ ರಥಬೀದಿ, ಬ್ಯಾಂಕ್ ರಸ್ತೆಯಾಗಿ, ರಾಷ್ಟ್ರೀಯ ಹೆದ್ದಾರಿಯಾಗಿ ಕೂಟೇಲುವಿನ ಕಂಬಳ ಕರೆಯವರೆಗೆ ಆಕರ್ಷಕ ಮೆರವಣಿಗೆ ನಡೆಯಿತು. ಕೊಂಬು ಕಹಳೆ, ಬ್ಯಾಂಡ್ ವಾದ್ಯಗಳಲ್ಲದೆ, ಕೀಲು ಕುದುರೆ, ತಟ್ಟಿರಾಯ, ಗೊಂಬೆ ಕುಣಿತಗಳು ಮೆರವಣಿಗೆಯ ಆಕರ್ಷಣೆ ಹೆಚ್ಚಿಸಿತ್ತು. ನೇತ್ರಾವತಿ ನದಿ ಹಿನ್ನೀರಿನಲ್ಲಿ ಬೋಟಿಂಗ್, ದಡದಲ್ಲಿ ಸಸ್ಯ ಮೇಳ, ಆಹಾರ ಮೇಳ, ಮಕ್ಕಳ ಮನೋರಂಜನೆಗಾಗಿ ಪುಟಾಣಿ ರೈಲು, ಕೊಲಂಬಸ್ ನೌಕೆಗಳೂ ಕೂಡಾ ಇದ್ದು, ಕಂಬಳಕ್ಕೆ ಬಂದವರು ಜಾತ್ರೆಯ ಸವಿಯನ್ನು ಉಂಡರು.