ಅಧ್ಯಕ್ಷರಾಗಿ ಉದಯ ಮಡಿವಾಳ ಎಂ. ಆಯ್ಕೆ

udaya
ಉದಯ
Published on

ಕುಂದಾಪುರ: ಬೆಂಗಳೂರು ಕರ್ನಾಟಕ ರಾಜ್ಯ ಗ್ರೇಡ್-1 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಕುಂದಾಪುರ ತಾಲೂಕು ಸಂಘ ಅಧ್ಯಕ್ಷರಾಗಿ ಕೋಟೇಶ್ವರ ಕರ್ನಾಟಕ ಪಬ್ಲಿಕ್ ಸ್ಕೂಲ್ ದೈಹಿಕ ಶಿಕ್ಷಣ ಶಿಕ್ಷಕ ಉದಯ ಮಡಿವಾಳ ಎಂ. ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ವಕ್ವಾಡಿ ಸರ್ಕಾರಿ ಪ್ರೌಢಶಾಲೆಯ ಕುಸುಮಾಕರ್ ಶೆಟ್ಟಿ, ಕಾರ್ಯದರ್ಶಿಯಾಗಿ ಹೆಸ್ಕುತೂರು ಸರ್ಕಾರಿ ಪ್ರೌಢಶಾಲೆಯ ಜಯಪ್ರಸಾದ್ ಶೆಟ್ಟಿ, ಸಂಘಟನಾ ಕಾರ್ಯದರ್ಶಿಯಾಗಿ ಬಸ್ರೂರು ಸರ್ಕಾರಿ ಪ್ರೌಢಶಾಲೆಯ ಸುಧಾಕರ್ ಶೆಟ್ಟಿ, ಜಂಟಿ ಕಾರ್ಯದರ್ಶಿಯಾಗಿ ಬಿದ್ಕಲ್‌ಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ರೇಷ್ಮಾ, ಖಜಾಂಚಿಯಾಗಿ ಬೀಜಾಡಿ ಸರ್ಕಾರಿ ಪ್ರೌಢಶಾಲೆಯ ಉದಯ್ ಮೊಗವೀರ ಆಯ್ಕೆಯಾಗಿದ್ದಾರೆ. ಕುಂದಾಪುರ ಕ್ಷೇತ್ರ ಚುನಾವಣಾಧಿಕಾರಿ, ಕುಂದಾಪುರ ಬೈಂದೂರು ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಅರುಣ್‌ಕುಮಾರ್ ಶೆಟ್ಟಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net