ಉಡಿ ತುಂಬುವ ಕಾರ್ಯಕ್ರಮ ನಾಳೆ

26 vikram 3
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಇಲ್ಲಿನ ಸುತಗಟ್ಟಿಯ ಗ್ರಾಮದೇವಿಯಾದ ಶ್ರೀ ದ್ಯಾಮವ್ವ ದೇವಿಯ ಉಡಿ ತುಂಬುವ ಕಾರ್ಯಕ್ರಮ ಮೇ 28ರಂದು ವಿಶೇಷ ರೀತಿಯಲ್ಲಿ ಜರುಗಲಿದೆ.
ಅಂದು ಬೆಳಗ್ಗೆ 6 ಗಂಟೆಗೆ ಗ್ರಾಮದ ಎಲ್ಲ ದೇವಸ್ಥಾನಗಳಲ್ಲಿನ ದೇವರ ಪಲ್ಲಕ್ಕಿ ಉತ್ಸವವು ವಿವಿಧ ವಾದ್ಯ ಮೇಳ ಹಾಗೂ ಕುಂಭ ಮೆರವಣಿಗೆ ಮೂಲಕ ದ್ಯಾಮವ್ವನ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಲಾಗುವುದು. ನಂತರ ಭಂಡಾರದ ಓಕಳಿಯೊಂದಿಗೆ ಆರಂಭವಾಗುವ ಮೆರವಣಿಗೆ ಗ್ರಾಮದಲ್ಲಿ ಸಂಚರಿಸಿ ದೇವಿ ಗುಡಿಗೆ ತೆರಳಿದ ಬಳಿಕ ಉಡಿತುಂಬುವ ಕಾರ್ಯಕ್ರಮ ನಡೆಯಲಿದೆ. ಮಹಾಪ್ರಸಾದ ನಡೆಯಲಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ದೇವಸ್ಥಾನ ಸಮಿತಿ ಕೋರಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net