

ದೇವದುರ್ಗ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅಂಗವಿಕಲರಿಗಾಗಿ ಜಾರಿಗೊಳಿಸಿರುವ ಯೋಜನೆಗಳ ಲಾಭ ಪಡೆಯಲು ಯುಡಿಐಡಿ ಕಾರ್ಯ ಕಡ್ಡಾಯಗೊಳಿಸಲಾಗಿದೆ. ಹೀಗಾಗಿ ಫಲಾನುಭವಿಗಳು ಯುಡಿಐಡಿ ಚೀಟಿ ಮಾಡಿಸಿಕೊಳ್ಳಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ಕೆ.ಹಂಪಯ್ಯ ಹೇಳಿದರು.
ಪಟ್ಟಣದ ಬಾಬುಜಗಜೀವನ ರಾಮ್ ಭವನದಲ್ಲಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಇಲಾಖೆ, ತಾಪಂನಿಂದ ಆಯೋಜಿಸಿದ್ದ ವಿಶೇಷಚೇತನರ ಮನೆ ಬಾಗಲಿಗೆ ಯುಡಿಐಡಿ ಕಾರ್ಡ್ ಮಾಸಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಗುರುವಾರ ಮಾತನಾಡಿದರು. ಎಂಆರ್‌ಡಬ್ಲುೃ, ವಿಆರ್‌ಡಬ್ಲುೃ, ಯುಆರ್‌ಡಬ್ಲುೃ ಯೋಜನೆಗಳ ಮಾಹಿತಿ ಪಡೆದು ಯುಡಿಐಡಿ ಕಾರ್ಯ ಮಾಡಿಸಿಕೊಂಡು ಕೇಂದ್ರ ಸರ್ಕಾರದ ವಿಶೇಷಚೇತನರ ಸೌಲಭ್ಯಗಳನ್ನು ಪಡೆಯಬೇಕೆಂದರು.
ಬಿಆರ್‌ಸಿ ರಾಮಣ್ಣ ಮಾತನಾಡಿ, ಕೇಂದ್ರ ಸರ್ಕಾರದ ವಿಶಿಷ್ಟ ಗುರುತಿನ ಚೀಟಿ ವಿಕಲಚೇತನರಿಗೆ ಬಹು ಉಪಯೋಗಿಯಾಗಿದೆ. ಕಾರ್ಡ್ ಮಾಡಿಸದಿದ್ದರೆ ಸರ್ಕಾರದ ಸೌಲಭ್ಯ ಸಿಗುವುದಿಲ್ಲ. ವಿಕಲಚೇತನರು ಸ್ವಾವಲಂಬನೆಯಿಂದ ಬದುಕಬೇಕು. ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ ವಿಆರ್‌ಡಬ್ಲ್ಯು ಸಂಸ್ಥೆ ಅಂಗವಿಕಲರ ಪರವಾಗಿ ಕೆಲಸ ನಿರ್ವಹಿಸುತ್ತಿದ್ದು, ಸಮರ್ಪಕವಾಗಿ ಮಾಹಿತಿ ಪಡೆದುಕೊಳ್ಳಬೇಕು. ಈ ಮೂಲಕ ಅಂಗವಿಕಲರ ಶೇ.5ರ ಅನುದಾನ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.