ಉಡುಪಿಯಲ್ಲಿ 77 ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರ, ಕೋವಿಡ್ ಹಿನ್ನೆಲೆಯಲ್ಲಿ ಸೆಂಟರ್ ಹೆಚ್ಚಳ

SSLC Board Exam 28 MAR 20
Published on

ಉಡುಪಿ: ಮುಂದಿನ ತಿಂಗಳು ಎಸ್ಸೆಸ್ಸೆಲ್ಸಿ ಪರೀಕ್ಷೆ ಜರುಗಲಿದ್ದು, ಶಾಲಾವಾರು ಗೂಗಲ್ ಮೀಟ್ ಮಾಡಿ ವಿದ್ಯಾರ್ಥಿಗಳಿಗೆ, ಪಾಲಕರಿಗೆ ಮಾಹಿತಿ ನೀಡಲಾಗುತ್ತಿದೆ. ಕೋವಿಡ್ ಕಾರಣದಿಂದ ಸಾಮಾಜಿಕ ಅಂತರ ಕಾಪಾಡುವ ಉದ್ದೇಶದಿಂದ 26 ಪರೀಕ್ಷಾ ಕೇಂದ್ರಗಳನ್ನು ಹೆಚ್ಚಿಸಲಾಗಿದೆ. ಕಳೆದ ಬಾರಿ 51 ಪರೀಕ್ಷಾ ಕೇಂದ್ರಗಳಿತ್ತು. ಈ ಬಾರಿ 77 ಪರೀಕ್ಷಾ ಕೇಂದ್ರಗಳಿವೆ ಎಂದು ಜಿಲ್ಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎನ್.ಎಚ್.ನಾಗೂರ ತಿಳಿಸಿದ್ದಾರೆ. ಬ್ರಹ್ಮಾವರ 3, ಬೈಂದೂರು 5. ಕುಂದಾಪುರ 5, ಕಾರ್ಕಳ 6 , ಉಡುಪಿ ಶೈಕ್ಷಣಿಕ ವಲಯದಲ್ಲಿ 6 ಹೊಸ ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗುವುದು. ಜಿಲ್ಲೆಯಲ್ಲಿ 13,336 ರೆಗ್ಯೂಲರ್ ಅಭ್ಯರ್ಥಿಗಳು, 204 ಖಾಸಗಿ ಅಭ್ಯರ್ಥಿಗಳು, 657 ರೆಗ್ಯೂಲರ್ ರಿಪೀಟರ್, 183 ಖಾಸಗಿ ರಿಪೀಟರ್ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಈಗಾಗಲೆ ಕೋವಿಡ್ ಮಾರ್ಗಸೂಚಿ ಅನುಸರಿಸಿ ಪರೀಕ್ಷೆಗಳಿಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮಕ್ಕಳಿಗೆ ಪರೀಕ್ಷೆ ಅನುಕೂಲವಾಗಲು 5 ಮಾದರಿ ಪ್ರೆಶ್ನೆ ಪತ್ರಿಕೆಗಳನ್ನು ವಿದ್ಯಾರ್ಥಿಗಳಿಗೆ ಮುಟ್ಟಿಸಲಾಗಿದೆ ಎಂದು ಡಿಡಿಪಿಐ ನಾಗೂರ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net