ವಕೀಲರನ್ನು ಗುರಿಯಾಗಿಸಿ ಹಲ್ಲೆ ಖಂಡನೀಯ

udp-5-protest
Published on

ಉಡುಪಿ: ಪೊಲೀಸರು ಚಿಕ್ಕಮಗಳೂರಿನಲ್ಲಿ ಯುವ ವಕೀಲನ ವಿರುದ್ಧ ಸುಳ್ಳು ಆರೋಪ ಹೊರಿಸಿ ಎಫ್​ಐಆರ್​ ದಾಖಲಿಸಿದ್ದಾರೆ. ವಕೀಲರ ಮೇಲೆ ಇಂತಹ ಹಲ್ಲೆ ಪ್ರಕರಣ ಹೆಚ್ಚುತ್ತಿದೆ. ವಕೀಲರನ್ನೇ ಗುರಿಯಾಗಿಸಿ ಹಲ್ಲೆ ನಡೆಸುತ್ತಿರುವುದು ಖಂಡನಾರ್ಹ ಎಂದು ಉಡುಪಿ ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್​ ಪ್ರವಿಣ್​ ಕುಮಾರ್​ ಹೇಳಿದರು.

ಮಂಗಳವಾರ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಚಿಕ್ಕಮಗಳೂರಿನ ಯುವ ವಕೀಲನ ಮೇಲೆ ಹಲ್ಲೆ ಖಂಡಿಸಿ ಉಡುಪಿ ವಕೀಲರ ಸಂಘದ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಪ್ರೀತಮ್​ ಅವರ ಮೇಲೆ ಚಿಕ್ಕಮಗಳೂರು ನಗರ ಪೊಲೀಸ್​ ಠಾಣೆಯ ಸಬ್​ ಇನ್​ಸ್ಪೆಕ್ಟರ್​ ಮತ್ತು ಇತರ ಪೊಲೀಸರು ನಡೆಸಿದ ಅಮಾನುಷ ಹಲ್ಲೆ ಖಂಡನೀಯ. ತಪ್ಪಿತಸ್ಥ ಪೊಲೀಸ್​ ಅಧಿಕಾರಿ ಮತ್ತು ಸಿಬ್ಬಂದಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನದಲ್ಲಿ ಮತ್ತಷ್ಟ್ಟು ತೀವ್ರ ರೀತಿಯಲ್ಲಿ ಪ್ರತಿಭಟಿಸಲಾಗುವುದು ಎಂದರು.

ಪ್ರಧಾನ ಕಾರ್ಯದರ್ಶಿ ರಾಜೇಶ್​ ಎ.ಆರ್​., ಹಿರಿಯ ನ್ಯಾಯವಾದಿ ಆನಂದ ಮಡಿವಾಳ ಉಪಾಧ್ಯಕ್ಷ ಮಿತ್ರ ಕುಮಾರ್​ ಶೆಟ್ಟಿ, ವಕೀಲರ ಸಂಘದ ಮಾಜಿ ಅಧ್ಯಕ್ಷ ಎ.ಸಂಜೀವ ಮತ್ತಿತರರು ಉಪಸ್ಥಿತರಿದ್ದರು. ವಕೀಲರ ಸಂದ ಸದಸ್ಯರು 15 ನಿಮಿಷ ಕಲಾಪ ಬಹಿಷ್ಕರಿಸಿ, ಪ್ರತಿಭಟನೆಯಲ್ಲಿ ಭಾಗಿಯಾದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net