

ಹೆಬ್ರಿ: ಉಡುಪಿ- ಶಿವಮೊಗ್ಗ ಜಿಲ್ಲೆ ಸಂಪರ್ಕಿಸುವ ಆಗುಂಬೆ ಘಾಟಿ 7ನೇ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ತಡೆಗೋಡೆಗೆ ಗುದ್ದಿ ಅಪಾಯಕಾರಿ ಸ್ಥಿತಿಯಲ್ಲಿ ನಿಂತ ಘಟನೆ ಗುರುವಾರ ಬೆಳಗಿನ ಜಾವ ಐದು ಗಂಟೆಗೆ ನಡೆದಿದೆ.
ಭತ್ತ ತುಂಬಿದ ಲಾರಿ ಶಿವಮೊಗ್ಗದಿಂದ ಹೆಬ್ರಿ ಕಡೆಗೆ ಸಂಚರಿಸುವಾಗ ಅಪಘಾತ ನಡೆದಿದೆ. ಇದರಿಂದಾಗಿ ಆಗುಂಬೆಘಾಟಿಯಲ್ಲಿ ಸಂಚಾರ ಕೆಲಕಾಲ ಸಂಚಾರಕ್ಕೆ ಸಮಸ್ಯೆ ಉಂಟಾಗಿತ್ತು. ಘಟನೆಯಲ್ಲಿ ಲಾರಿ ಚಾಲಕ ಹಾಗೂ ಕ್ಲೀನರ್ ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಆಗಮಿಸಿದ ಆಗುಂಬೆ ಪೊಲೀಸ್ ಠಾಣೆ ಸಿಬ್ಬಂದಿ ಲಾರಿಯನ್ನು ಮೇಲೆತ್ತಿ ಸಂಚಾರವನ್ನು ಸುಗಮಗೊಳಿಸಿದರು.
ಆಗುಂಬೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.