

ಉಡುಪಿ: ಬಿಜೆಪಿ ಕಾರ್ಯಕರ್ತರ ಪಕ್ಷ. ಕೇವಲ 2 ಸ್ಥಾನದಿಂದ ಇಂದಿಗೆ 303 ಸ್ಥಾನ ಪಡೆದಿರುವುದು ಅವರ ಶ್ರಮದ ಫಲ. ಹೀಗಾಗಿ ಜಿಲ್ಲೆಗೆ ಬಂದಾಗ ಸಚಿವರು ಪಕ್ಷದ ಕಾರ‌್ಯಾಲಯಕ್ಕೆ ಭೇಟಿ ನೀಡುವುದು ಅಗತ್ಯ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು.
ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು. ಕಾರ್ಯಕರ್ತರ ಅಹವಾಲು ಸ್ವೀಕರಿಸಿ ಸರ್ಕಾರ ಮಟ್ಟದಲ್ಲಿ ಅದನ್ನು ಜಾರಿಗೊಳಿಸಲು ಪ್ರಯತ್ನಿಸಲಾಗುವುದು. ವರಿಷ್ಠರೂ ಈ ಬಗ್ಗೆ ಸೂಚನೆ ನೀಡಿದ್ದಾರೆ ಎಂದರು.
ಜಿಲ್ಲಾಧ್ಯಕ್ಷ ಸುರೇಶ್ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಶಾಸಕ ರಘುಪತಿ ಭಟ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ನಗರಸಭಾ ಅಧ್ಯಕ್ಷೆ ಸುಮಿತ್ರಾ ನಾಯಕ್, ತಾಪಂ ಅಧ್ಯಕ್ಷೆ ಸಂಧ್ಯಾ ಕಾಮತ್, ನಗರಾಧ್ಯಕ್ಷ ಮಹೇಶ್ ಠಾಕೂರ್, ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಶೆಟ್ಟಿ ಉಪಸ್ಥಿತರಿದ್ದರು.