

ಉಡುಪಿ: ಯೇಸು ಕ್ರಿಸ್ತರು ಶಿಲುಬೆಗೇರಿ ಪುನರುತ್ಥಾನರಾದ ಈಸ್ಟರ್ ಜಾಗರಣೆ ಶನಿವಾರ ರಾತ್ರಿ ಜಿಲ್ಲೆಯಾದ್ಯಂತ ಶ್ರದ್ಧಾ ಭಕ್ತಿಯಿಂದ ಜರುಗಿತು.
ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಜೆರಾಲ್ಡ್ ಐಸಾಕ್ ಲೋಬೊ ನೇತೃತ್ವದಲ್ಲಿ ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ನಲ್ಲಿ ಸಂಭ್ರಮದಿಂದ ನಡೆಯಿತು. ಈ ಸಂದರ್ಭದಲ್ಲಿ ಚರ್ಚಿನ ಪ್ರಧಾನ ಧರ್ಮಗುರು ವಲೇರಿಯನ್ ಮೆಂಡೊನ್ಸಾ, ಸಹಾಯಕ ಧರ್ಮಗುರು ವಂ. ಜೋಯ್ ಅಂದ್ರಾದೆ, ಪಿಲಾರ್ ಸಭೆಯ ಡೆನ್ಜಿಲ್ ಮಾರ್ಟಿಸ್, ನಿತೇಶ್ ಡಿ’ಸೋಜ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಬೃಹತ್ ಗಾತ್ರದ ಈಸ್ಟರ್ ಕ್ಯಾಂಡಲ್ ಹಚ್ಚಿ ಮೆರವಣಿಗೆಯಲ್ಲಿ ಸಾಗಿ ಬಂದು ಚರ್ಚ್‌ನ ಪ್ರಧಾನ ಸ್ಥಳದಲ್ಲಿ ಪ್ರತಿಷ್ಠಾಪಿಸಲಾಯಿತು. ಬಳಿಕ ಹಳೆ ಹಾಗೂ ಹೊಸ ಒಡಂಬಡಿಕೆಯ ಆಯ್ದ ಭಾಗಗಳ ವಾಚನ ಮಾಡಲಾಯಿತು. ಧರ್ಮಾಧ್ಯಕ್ಷರು ಮತ್ತು ಧರ್ಮಗುರುಗಳು ಹೊಸ ನೀರನ್ನು ಚಿಮ್ಮಿಸಿ ಆಶೀರ್ವದಿಸಿದರು.