ಉಡುಪಿಯಲ್ಲಿ 225 ಪಾಸಿಟಿವ್

corona
Published on

ಉಡುಪಿ: ಜಿಲ್ಲೆಯಲ್ಲಿ ಸೋಮವಾರ 225 ಮಂದಿಗೆ ಕರೊನಾ ಪಾಸಿಟಿವ್ ದೃಢಪಟ್ಟಿದೆ. ಇದರಲ್ಲಿ 121 ಪರುಷರು, 91 ಮಹಿಳೆಯರು, 13 ಮಂದಿ ಮಕ್ಕಳು ಸೇರಿದ್ದಾರೆ.

ಉಡುಪಿ 68, ಕುಂದಾಪುರ 115, ಕಾರ್ಕಳದ 42 ಮಂದಿಗೆ ಸೋಂಕು ತಗುಲಿದೆ. ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಲ್ಲಿ ನಾಲ್ವರು ಮೃತಪಟ್ಟಿದ್ದು, ಇವರಿಗೆ ಕೋವಿಡ್ ಸೋಂಕು ಧೃಡಪಟ್ಟಿದೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.

ಸೋಮವಾರ 286 ಮಂದಿಯ ವರದಿ ನೆಗೆಟಿವ್ ಬಂದಿದೆ. 276 ಮಂದಿಯ ವರದಿ ಬರಲು ಬಾಕಿ ಇದೆ. 223 ಮಂದಿಯ ಗಂಟಲ ದ್ರವ ಮಾದರಿ ಸಂಗ್ರಹಿಸಲಾಗಿದೆ.

ಜಿಲ್ಲೆಯಲ್ಲಿ ಇದುವರೆಗೆ ಒಟ್ಟು ಸೋಂಕಿತರ ಸಂಖ್ಯೆ 3613ಕ್ಕೆ ಏರಿಕೆಯಾಗಿದೆ. 2184 ಮಂದಿ ಡಿಸ್ಚಾರ್ಜ್ ಆಗಿದ್ದು, 1415 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೃತಪಟ್ಟ ನಾಲ್ವರು 50 ವರ್ಷ ಮೀರಿದವರಾಗಿದ್ದು, ಮೂವರು ಪುರುಷರು, ಒಬ್ಬ ಮಹಿಳೆ ಇದ್ದಾರೆ. ಈ ಬಗ್ಗೆ ಅಧಿಕೃತ ಮಾಹಿತಿ, ಹೆಚ್ಚಿನ ವಿವರಣೆ ಜಿಲ್ಲಾಡಳಿತ ನೀಡಿಲ್ಲ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net