ಉಡುಪಿಯಲ್ಲಿ 109 ಪಾಸಿಟಿವ್

corona
Published on

ಉಡುಪಿ: ಜಿಲ್ಲೆಯಲ್ಲಿ ಮಂಗಳವಾರ 109 ಮಂದಿಯ ವರದಿ ಪಾಸಿಟಿವ್ ಬಂದಿದೆ. ಉಡುಪಿ 36, ಕುಂದಾಪುರ 46, ಕಾರ್ಕಳದ 27 ಮಂದಿ ಇದ್ದು, ಮಹಿಳೆಯರು 42, ಪುರುಷರು 56, 11 ಮಕ್ಕಳು ಸೋಂಕಿತರಾಗಿದ್ದಾರೆ.

422 ಮಂದಿಯ ವರದಿ ನೆಗೆಟಿವ್ ಬಂದಿದ್ದು, 55 ಮಂದಿ ಗುಣವಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3722ಕ್ಕೆ ಏರಿದೆ. ಇದುವರೆಗೆ 2239 ಮಂದಿ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

1461 ಸಕ್ರಿಯ ಪ್ರಕರಣಗಳಿವೆ. 671 ಮಂದಿಯ ವರದಿ ಬರಲು ಬಾಕಿ ಇದೆ. ಮಂಗಳವಾರ 926 ಮಂದಿಯ ಗಂಟಲದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ಸೋಮವಾರ ರಾತ್ರಿ ಅಂಬಲಪಾಡಿಯ 60 ವರ್ಷದ ಮಹಿಳೆ ಮೃತಪಟ್ಟಿದ್ದು, ಇವರಿಗೆ ಕರೊನಾ ಸೋಂಕು ಇರುವುದು ದೃಢಪಟ್ಟಿತ್ತು.

ಶ್ವಾಸಕೋಶ ಸಮಸ್ಯೆಯಿಂದ ಬಳಲುತಿದ್ದ ಇವರು ಕೆಲವು ದಿನಗಳಿಂದ ಚಿಕಿತ್ಸೆ ಪಡೆಯುತಿದ್ದರು. 50 ವರ್ಷದ ವೃದ್ದರೊಬ್ಬರು ಸೋಮವಾರ ಬೆಳಗ್ಗೆ ಮೃತಪಟ್ಟಿದ್ದು, ಮಣಿಪಾಲ ಆಸ್ಪತ್ರೆಯಲ್ಲಿ ಕಿಡ್ನಿ ಸಮಸ್ಯೆ, ಜ್ವರಕ್ಕೆ ಚಿಕಿತ್ಸೆ ಪಡೆಯುತ್ತಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net