ಉಡುಪಿಯಲ್ಲಿ 5 ಸಾವಿರ ದಾಟಿದ ಸೋಂಕಿತರ ಸಂಖ್ಯೆ

corona
Published on

ಉಡುಪಿ: ಜಿಲ್ಲೆಯಲ್ಲಿ ಬುಧವಾರ 173 ಕರೊನಾ ಪಾಸಿಟಿವ್ ವರದಿಯಾಗಿದ್ದು, ಸೋಂಕಿತರ ಸಂಖ್ಯೆ 5143ಕ್ಕೇರಿದೆ.

ಹಿರಿಯ ನಾಗರಿಕರಿಬ್ಬರು ಮೃತಪಟ್ಟಿದ್ದು, ಇವರಿಗೆ ಕರೊನಾ ಸೋಂಕು ದೃಢವಾಗಿದೆ. ಬ್ರಹ್ಮಾವರ ತಾಲೂಕಿನ 82ರ ಹರೆಯದ ವೃದ್ಧರೊಬ್ಬರು ಮಂಗಳವಾರ ರಾತ್ರಿ ಕುಂದಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಮಣಿಪಾಲ ಕೆಎಂಸಿಯಲ್ಲಿ ಕಾರ್ಕಳ ತಾಲೂಕಿನ 55 ವರ್ಷದ ಮಹಿಳೆ ಮೃತಪಟ್ಟಿದ್ದಾರೆ. ಇಬ್ಬರು ವಿವಿಧ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಪಾಸಿಟಿವ್ ಬಂದಿರುವ 173 ಮಂದಿಯಲ್ಲಿ ಉಡುಪಿ ತಾಲೂಕಿನ 76, ಕುಂದಾಪುರ ತಾಲೂಕಿನ 57 ಹಾಗೂ ಕಾರ್ಕಳ ತಾಲೂಕಿನ 39 ಮಂದಿ ಸೇರಿದ್ದಾರೆ.

ಒಬ್ಬರು ಹೊರಜಿಲ್ಲೆಯವರು. 1244 ಮಂದಿಯ ವರದಿ ನೆಗೆಟಿವ್ ಬಂದಿದೆ. 124 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. 2027 ಸಕ್ರಿಯ ಪ್ರಕರಣಗಳಿದ್ದು, ಬುಧವಾರ 1853 ಮಂದಿಯ ಗಂಟಲುದ್ರವ ಮಾದರಿ ಸಂಗ್ರಹಿಸಲಾಗಿದೆ. ಇನ್ನು 1140 ಮಂದಿಯ ವರದಿ ನಿರೀಕ್ಷಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net