ಧಾರ್ಮಿಕ ಕಾರ್ಯಗಳಿಂದ ಸಂಘಟನೆ ಸಾಧ್ಯ

Dasara-1
Published on

ಉಡುಪಿ ಶಾಸಕ ಯಶ್​ಪಾಲ್​ ಸುವರ್ಣ ಅನಿಸಿಕೆ

'ಉಡುಪಿ ದಸರಾ ಮಹೋತ್ಸವ' ಉದ್ಘಾಟನೆ

ವಿಜಯವಾಣಿ ಸುದ್ದಿಜಾಲ ಉಡುಪಿ
ಇತ್ತೀಚೆಗಿನ ಕೆಲ ವರ್ಷಗಳಿಂದ ಉಡುಪಿಯಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಹೆಚ್ಚು ನಡೆಯುತ್ತಿರುವುದು ಸಂತಸದ ವಿಚಾರವಾಗಿದೆ. ನವರಾತ್ರಿಯ ಸಂದರ್ಭದಲ್ಲಿ ಉಡುಪಿ ದಸರಾ ಹೆಸರಲ್ಲಿ ಉತ್ಸವ ಆಚರಿಸುವುದರಿಂದ ಯುವ ಸಮುದಾಯಕ್ಕೂ ಸಹ ಧಾರ್ಮಿಕ ಭಾವನೆ, ಜಾಗೃತಿ ಮೂಡುತ್ತದೆ. ಮುಖ್ಯವಾಗಿ ಇಂತಹ ಕಾರ್ಯಕ್ರಮಗಳಿಂದ ಸಂಘಟಿತರಾಗಲು ಸಾಧ್ಯವಿದೆ ಎಂದು ಶಾಸಕ ಯಶ್​ಪಾಲ್​ ಸುವರ್ಣ ಹೇಳಿದರು.

ಉಡುಪಿಯ ಅಜ್ಜರಕಾಡು ಗೋವಿಂದ ಕಲ್ಯಾಣ ಮಂಟಪದಲ್ಲಿ ದಸರಾ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಉಡುಪಿ ವತಿಯಿಂದ ಬುಧವಾರ ರಾತ್ರಿ ಆಯೋಜಿಸಿದ್ದ ನವಮ ವರ್ಷದ ಉಡುಪಿ ದಸರಾ ಮಹೋತ್ಸವ ಉದ್ಘಾಟಿಸಿ ಮಾತನಾಡಿದರು.

Dasara-2

ಬಿಜೆಪಿ ಮುಖಂಡ ಉದಯಕುಮಾರ್​ ಶೆಟ್ಟಿ ಕಿದಿಯೂರು, ಜಿಲ್ಲಾ ಸಹಕಾರಿ ಯೂನಿಯನ್​ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಮತ್ಸ್ಯೋದ್ಯಮಿ ಆನಂದ ಪಿ. ಸುವರ್ಣ, ಕೊಡವೂರು ಶ್ರೀ ಶಂಕರನಾರಾಯಣ ದೇವಳದ ಅಧ್ಯಕ್ಷ ಸಾಧು ಸಾಲ್ಯಾನ್​, ಕಟಪಾಡಿ ಕಾಳಿಕಾಂಬಾ ದೇವಸ್ಥಾನದ ಮೊಕ್ತೇಸರ ಮುರಹರಿ ಆಚಾರ್ಯ, ರಾಜ್ಯ ಕೈಗಾರಿಕಾ ಮತ್ತು ವಾಣಿಜ್ಯ ಮಹಾಸಂಸ್ಥೆಯ ನಿರ್ದೇಶಕ ಅಂಡಾರು ದೇವಿಪ್ರಸಾದ್​ ಶೆಟ್ಟಿ, ವೀಣಾ ಶೆಟ್ಟಿ, ಶಾರದಾ ಮಹೋತ್ಸವ ಸಮಿತಿಯ ಪ್ರ.ಕಾರ್ಯದರ್ಶಿ ಲಕ್ಷ್ಮೀನಾರಾಯಣ ರಾವ್​ ಮಟ್ಟು, ಉಪಾಧ್ಯಕ್ಷ ರಾಧಾಕೃಷ್ಣ ಮೆಂಡನ್​ ಮಲ್ಪೆ, ಸುರೇಶ್​ ಶೇರಿಗಾರ್​, ಪದ್ಮಾ ರತ್ನಾಕರ್​ ಉಪಸ್ಥಿತರಿದರು.

ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಹಾಗೂ ಭಕ್ತೀಗಿತೆ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ದಾಮೋದರ್​ ಭಟ್​ ಕರಂಬಳ್ಳಿ ಧಾರ್ಮಿಕ ಪೂಜಾ ವಿಧಿ-ವಿಧಾನ ನೆರವೇರಿಸಿದರು.

ಶಾರದೋತ್ಸವ ಸಮಿತಿಯ ಅಧ್ಯಕ್ಷ ಬೈಕಾಡಿ ಸುಪ್ರಸಾದ್​ ಶೆಟ್ಟಿ ಸ್ವಾಗತಿಸಿದರು. ತಾರಾ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು. ಸಮಾರಂಭದ ಬಳಿಕ ಕುಣಿತ ಭಜನೆ ನಡೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net