

ಉಡುಪಿ: ಗ್ಯಾರಂಟಿ ಯೋಜನೆಗಳ ಸಮಾವೇಶ ಹಾಗೂ ಜಿಲ್ಲೆಯ ವಿವಿಧ ಕಾಮಗಾರಿ ಉದ್ಘಾಟನಾ ಕಾರ್ಯಕ್ರಮ ಮಾ. 13ರಂದು ಬೆಳಗ್ಗೆ 11ಕ್ಕೆ ಕುಂಜಿಬೆಟ್ಟುವಿನ ಮಹಾತ್ಮ ಗಾಂಧೀ ಮೆಮೋರಿಯಲ್ ಕಾಲೇಜಿನ ಆರೂರು ಲಕ್ಷಿ$್ಮ ನಾರಾಯಣ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ತಿಳಿಸಿದರು.
ರಜತಾದ್ರಿಯಲ್ಲಿ ಗ್ಯಾರಂಟಿ ಯೋಜನೆಗಳ ಸಮಾವೇಶ ಹಾಗೂ ವಿವಿಧ ಕಾಮಗಾರಿ ಅಯೋಜನೆ ಕುರಿತ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮಾ. 13ರಂದು ಬೆಳಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಗ್ಯಾರಂಟಿ ಯೋಜನೆಗಳ ಸಮಾವೇಶ ಹಾಗೂ ವಿವಿಧ ಕಾಮಗಾರಿಗಳ ಉದ್ಘಾಟಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷಿ$್ಮ ಆರ್ ಹೆಬ್ಬಾಳಕರ್, ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾದ ಕೆ.ಹೆಚ್. ಮುನಿಯಪ್ಪ, ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ, ಇಂಧನ ಸಚಿವ ಕೆ.ಜೆ ಜಾರ್ಜ್, ಕಂದಾಯ ಸಚಿವ ಕೃಷ್ಣ ಭೈರೇಗೌಡ, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಖ ರ್ಖಗೆ, ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್, ವೈದ್ಯಕಿಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್, ಹಿಂದುಳಿದ ವರ್ಗಗಳ ಇಲಾಖೆ ಸಚಿವ ತಂಗಡಗಿ ಶಿವರಾಜ್ ತಂಗಪ್ಪ, ಶಿಕ್ಷಣ ಸಚಿವ ಎಸ್ ಮಧು ಬಂಗಾರಪ್ಪ ಉನ್ನತ ಶಿಕ್ಷಣ ಸಚಿವರಾದ ಎನ್.ಸಿ ಸುಧಾಕರ್ ಭಾಗವಹಿಸಲಿದ್ದಾರೆ ಎಂದರು.
ಜಿಲ್ಲಾ ಮಟ್ಟದ ಸಮಾವೇಶ ಕಾರ್ಯಕ್ರಮಕ್ಕೆ ಸಹಸ್ರಾರು ಸಂಖ್ಯೆಯ ಫಲಾನುಭವಿಗಳೂ, ಸಾರ್ವಜನಿಕರು ಪಾಲ್ಗೊಳ್ಳಲಿದ್ದು, ಅಗತ್ಯವಿರುವ ಕುಡಿಯುವ ನೀರು, ಊಟದ ವ್ಯವಸ್ಥೆ ಹಾಗೂ ಬಸ್ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಕಾರ್ಯಕ್ರಮದಲ್ಲಿ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸೌಲಭ್ಯಗಳ ವಿತರಣೆ ನಡೆಯಲಿದೆ. ಸಾರ್ವಜನಿಕರ ವಾಹನಗಳ ನಿಲುಗಡೆಗೆ ಪಾರ್ಕಿಂಗ್ ವ್ಯವಸ್ಥೆಗಳನ್ನು ಗುರುತಿಸಿ, ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಸೂಚನೆ ನೀಡಿದರು.
ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತಿಕ್ ಬಾಯಲ್ ಮಾತನಾಡಿದರು. ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಜಿ.ಪಂ. ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ್ ರಾವ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಐ.ಪಿ ಗಡಾಧ್ ಉಪಸ್ಥಿತರಿದ್ದರು.