ಉಡುಪಿ ಜಿಲ್ಲಾಧಿಕಾರಿಗೆ ರಾಷ್ಟ್ರೀಯ ಪ್ರಶಸ್ತಿ

DC
Published on

ಉಡುಪಿ: ನ್ಯಾಷನಲ್ ಕಮಿಷನ್ ಫಾರ್ ಪ್ರೊಟೆಕ್ಷನ್ ಆಫ್ ಚೈಲ್ಡ್ ರೈಟ್ಸ್ ವತಿಯಿಂದ ಜಿಲ್ಲೆಯಲ್ಲಿ ಮಾದಕದ್ರವ್ಯ ನಿಯಂತ್ರಣ ಹಾಗೂ ಮಕ್ಕಳ ಅಕ್ರಮ ಸಾಗಾಟ ತಡೆ ಕಾಯ್ದೆ ಪರಿಣಾಮಕಾರಿ ಅನುಷ್ಠಾನ ಹಾಗೂ ಜಾಗೃತಿಗಾಗಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ. ಅವರಿಗೆ ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ. ಅಖಿಲ ಭಾರತ ಮಟ್ಟದಲ್ಲಿ ಈ ಪ್ರಶಸ್ತಿಗೆ ಆಯ್ಕೆಯಾದ 20 ಜಿಲ್ಲೆಗಳಲ್ಲಿ ಉಡುಪಿ ಕರ್ನಾಟಕದ ಏಕೈಕ ಜಿಲ್ಲೆ.
ಬುಧವಾರ ನವದೆಹಲಿಯ ವಿಜ್ಞಾನ ಭವನದಲ್ಲಿ ಜಿಲ್ಲಾಧಿಕಾರಿ ಪರವಾಗಿ ನೆಹರು ಯುವ ಕೇಂದ್ರ ನಿರ್ದೇಶಕ ವಿಲ್ಫ್ರೆಡ್ ಡಿಸೋಜಾ ಪ್ರಶಸ್ತಿ ಸ್ವೀಕರಿಸಿದರು. ನ್ಯಾಷನಲ್ ಕಮಿಷನ್ ಫಾರ್ ಪ್ರೊಟೆಕ್ಷನ್ ಆಫ್ ಚೈಲ್ಡ್ ರೈಟ್ಸ್ ಅಧ್ಯಕ್ಷ ಪ್ರಿಯಾಂಕ್ ಕನಂಗೋ, ಸದಸ್ಯ ಕಾರ್ಯದರ್ಶಿ ರೂಪಾಲಿ ಬ್ಯಾನರ್ಜಿ ಸಿಂಗ್, ನಾರ್ಕೋಟಿಕ್ ಕಂಟ್ರೋಲ್ ಬ್ಯೂರೋ ನಿರ್ದೇಶಕ ಸತ್ಯನಾರಾಯಣ ಪ್ರಧಾನ್, ಉಪನಿರ್ದೇಶಕ ಸಚಿನ್ ಜೈನ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net