

ಉಡುಪಿ: ಪಹಲ್ಗಾಮ್ ನಲ್ಲಿ ೨೬ ಅಮಾಯಕ ಭಾರತೀಯ ಪ್ರವಾಸಿಗರ ಧರ್ಮ ಕೇಳಿ ಹತ್ಯಾಕಾಂಡ ನಡೆಸಿರುವ ಪಾಕಿಸ್ತಾನ ಪ್ರಯೋಜಿತ ಉಗ್ರರಿಗೆ ಹಾಗೂ ಬೆಂಬಲಿಗರಿಗೆ ಭಾರತ ತಕ್ಕ ಶಾಸ್ತಿಯನ್ನು ಮಾಡಿದೆ. 'ಸಿಂಧೂರ' ಅಳಿಸಿದವರಿಗೆ 'ಆಪರೇಷನ್ ಸಿಂಧೂರ' ಮೂಲಕ ಭಾರತೀಯ ಸೇನೆ ದಿಟ್ಟ ಉತ್ತರ ನೀಡಿದೆ ಎಂದು ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದರು.
ಅವರು ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಜಿಲ್ಲಾ ಪದಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ದೇಶವಾಸಿಗಳ ಮೇಲಿನ ಪ್ರೀತಿ, ಗೌರವ ಹಾಗೂ ಬದ್ಧತೆಯಿಂದ ಇಂತಹ ದಿಟ್ಟ ನಿರ್ಧಾರಗಳನ್ನು ಕೈಗೊಳ್ಳಲು ಪ್ರಧಾನಿ ಮೋದಿಯವರಿಗೆ ಸಾಧ್ಯವಾಗಿದೆ. ಶತ್ರು ರಾಷ್ಟ್ರ ಪಾಕಿಸ್ತಾನ ಇಂತಹ ದುಷ್ಟ ಕೃತ್ಯಗಳಿಗೆ ಪ್ರೋತ್ಸಾಹ ನೀಡುವುದನ್ನು ನಿಲ್ಲಿಸಿ ಆತ್ಮವಿಮರ್ಶೆ ಮಾಡಿಕೊಳ್ಳಲು ಇದು ಸಕಾಲವಾಗಿದೆ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಜಿಲ್ಲಾ ಉಪಾಧ್ಯಕ್ಷರಾದ ಕಿರಣ್ ಕುಮಾರ್ ಬೈಲೂರು, ಪೆರಣಂಕಿಲ ಶ್ರೀಶ ನಾಯಕ್, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಜಯರಾಮ್ ಸಾಲ್ಯಾನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಜಿಲ್ಲಾ ಪದಾಧಿಕಾರಿಗಳಾದ ರಾಘವೇಂದ್ರ ಕುಂದರ್, ಶ್ರೀಕಾಂತ್ ನಾಯಕ್, ಶಿವಕುಮಾರ್ ಅಂಬಲಪಾಡಿ, ಗಿರೀಶ್ ಎಂ. ಅಂಚನ್, ಪ್ರಿಯದರ್ಶಿನಿ ದೇವಾಡಿಗ, ಅನಿತಾ ಶ್ರೀಧರ್, ದಿಲೇಶ್ ಶೆಟ್ಟಿ, ಶಂಕರ ಅಂಕದಕಟ್ಟೆ, ಸಂಧ್ಯಾ ರಮೇಶ್, ನಳಿನಿ ಪ್ರದೀಪ್ ರಾವ್, ಅಭಿರಾಜ್ ಸುವರ್ಣ, ರುಡಾಲ್ಫ್ ಡಿಸೋಜ, ಕರುಣಾಕರ ಶೆಟ್ಟಿ, ವಿವೇಕ್ ಪೈ, ದಿನೇಶ್ ಅಮೀನ್, ಜಿತೇಂದ್ರ ಶೆಟ್ಟಿ, ರಾಜೀವ್ ಕುಲಾಲ್, ರಶ್ಮಿತಾ ಬಿ. ಶೆಟ್ಟಿ, ಸಚಿನ್ ಪೂಜಾರಿ, ಗೋಪಾಲಕೃಷ್ಣ ರಾವ್ ಮಟ್ಟು, ಶರಣ್ ಕುಮಾರ್ ಮಟ್ಟು, ಸತೀಶ್ ಪೂಜಾರಿ ಕುಂದಾಪುರ, ಸುಧೀರ್ ಕೆ.ಎಸ್. ಕುಂದಾಪುರ, ನಾರಾಯಣಮೂರ್ತಿ, ಕೆ.ದಿವಾಕರ ಶೆಟ್ಟಿ ಕಾಪು, ಪ್ರವೀಣ್ ಕುಮಾರ್ ಗುರ್ಮೆ ಮುಂತಾದವರು ಉಪಸ್ಥಿತರಿದ್ದರು. ಜಿಲ್ಲೆಯ ಎಲ್ಲಾ ೬ ಮಂಡಲ ಕೇಂದ್ರಗಳಲ್ಲಿ ಸಿಹಿ ಹಂಚಿ 'ಆಪರೇಷನ್ ಸಿಂಧೂರ್'ನ ಯಶಸ್ವೀ ಕಾರ್ಯಾಚರಣೆಯ ಸಂಭ್ರಮಾಚರಣೆ ನಡೆಸಲಾಯಿತು.