ಉಪಲೋಕಾಯುಕ್ತರ ಅಹವಾಲು ಸ್ವೀಕಾರಕ್ಕೆ ಜಿಲ್ಲಾಡಳಿತ ಸಿದ್ಧತೆ

upa lokayukta panindra
Published on

ಉಡುಪಿ: ಮಣಿಪಾಲನ ರಜತಾದ್ರಿಯ ಅಟಲ್​ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಫೆ. 3 ರಂದು ಉಪಲೋಕಯುಕ್ತ ನ್ಯಾಯಮೂರ್ತಿ ಕೆ.ಎನ್​.ಫಣೀಂದ್ರ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಹಾಗೂ ವಿಚಾರಣೆ ನಡೆಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಜಿಲ್ಲಾಡಳಿತ ಅಗತ್ಯ ಸಿದ್ಧತೆ ಮಾಡಿಕೊಂಡಿದೆ.
10 ರಿಂದ ಸಾರ್ವಜನಿಕರಿಂದ ಜಿಲ್ಲೆಯ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರು ಸರ್ಕಾರಿ ಕೆಲಸ ಮಾಡಲು ವೀಳಂಬ ಮಾಡುತ್ತಿದರೆ ಅಥವಾ ತೊಂದರೆ ನೀಡುತ್ತಿದರೆ ಲಿಖಿತವಾಗಿ ಅಹವಾಲುವನ್ನು ನೀಡಿ ಪರಿಹಾರ ಪಡೆಯಬಹುದಾಗಿದೆ. ಸಾರ್ವಜನಿಕರು ನೀಡಿದ ಅರ್ಜಿಗಳನ್ನು ಸ್ವೀಕರಿಸಲು ರಜತಾದ್ರಿ ಅಟಲ್​ ಬಿಹಾರಿ ವಾಜಪೇಯಿ ಸಭಾಂಗಣದ ಹೊರಂಗಣದಲ್ಲಿ ಮೂರು ಪ್ರತ್ಯೇಕ ಕೌಂಟರ್​ಗಳನ್ನು ತೆರೆಯಲಾಗಿದೆ. ಇಲಾಖೆಗಳಿಗೆ ಸಂಬಂಧಿಸಿದಂತೆ ದೂರುಗಳು ಇದ್ದಲ್ಲೀ ಪ್ರತ್ಯೇಕವಾಗಿ ಅರ್ಜಿಗಳನ್ನು ಸಾರ್ವಜನಿಕರು ನೀಡಬಹುದಾಗಿದೆ, ಪ್ರತಿಯೊಂದು ಅರ್ಜಿಗೂ ಪ್ರತ್ಯೇಕ ಟೋಕನ್​ ನಂಬರ್​ ಅನ್ನು ನೀಡಲಾಗುತ್ತದೆ. ಕಂಪ್ಯೂಟರ್​ ಮೂಲಕ ದಾಖಲೀಕರಣಗೊಳಿಸಿಕೊಳ್ಳಲಾಗುವುದು. ಇದಕ್ಕೆ ಅಗತ್ಯವಿರುವ ಕಂಪ್ಯೂಟರ್​ಗಳನ್ನು ಜೋಡಿಸಲಾಗಿದೆ. ಟೋಕನ್​ ನಂಬರ್​ ಆಧಾರಿತವಾಗಿ ಅರ್ಜಿಗಳನ್ನು ಕರೆದು ವಿಚಾರಣೆಯನ್ನು ನಡೆಸಲಾಗುವುದು. ಹೆಲ್ಪ್​ ಡೆಸ್ಕ್​ ಪ್ರಾರಂಭಿಸಲಾಗಿದೆ. ಈಗಾಗಲೇ ಪ್ರತಿ ಕೌಂಟರ್​ ಗೆ ಇಬ್ಬರಂತೆ ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ ನಿಯೋಜಿಸಲಾಗಿದೆ.

ಜಿಲ್ಲೆಯಲ್ಲಿ ಉಪಲೋಕಾಯುಕ್ತರ ಪ್ರವಾಸ
ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್​.ಫಣೀಂದ್ರ ಫೆ. 2 ರಿಂದ 5ರವರೆಗೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಫೆ.3 ರಂದು 10 ರಿಂದ ಮಧ್ಯಾಹ್ನ 1.30 ರವರೆಗೆ ಹಾಗೂ ಮಧ್ಯಾಹ್ನ 2.30ರಿಂದ ಸಾಯಂಕಾಲ 5 ಗಂಟೆವರೆಗೆ ಮಣಿಪಾಲ್​ನ ರಜತಾದ್ರಿಯ ಅಟಲ್​ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಸಾರ್ವಜನಿಕರ ಕುಂದು ಕೊರತೆಗಳ ಅಹವಾಲು ಸ್ವೀಕಾರ ಹಾಗೂ ವಿಚಾರಣೆ ನಡೆಸಲಿದ್ದಾರೆ. ಸಾಯಂಕಾಲ 5.30 ರಿಂದ 6.30 ರವರೆಗೆ ಜಿಪಂ ಸಭಾಂಗಣದಲ್ಲಿ ಶಿಕ್ಷಣ ಇಲಾಖೆ, ರೇಷ್ಮೆ ಇಲಾಖೆ, ಕೃಷಿ ಮತ್ತು ತೋಟಗಾರಿಕೆ ಇಲಾಖೆ ಸಹಿತ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಾರ್ವಜನಿಕ ಆಡಳಿತದಲ್ಲಿ ಲೋಕಾಯುಕ್ತ ಸಂಸ್ಥೆಯ ಪಾತ್ರ ಮತ್ತು ಲೋಕಾಯುಕ್ತ ಕಾಯ್ದೆ 1984 ರ ಕುರಿತು ಕಾನೂನು ಅರಿವು-&ನೆರವು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಫೆ.4 ರಂದು ಬೆಳಗ್ಗೆ 10 ರಿಂದ 11ರ ವರೆಗೆ ಜಿಲ್ಲಾ ನ್ಯಾಯಾಲಯ ಸಂಕೀರ್ಣ ವೀಡಿಯೋ ಕಾನ್ಫರೆನ್ಸ್​ ಸಭಾಂಗಣದಲ್ಲಿ ನ್ಯಾಯಾಂಗ ಅಧಿಕಾರಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಬೆಳಗ್ಗೆ 11.15 ರಿಂದ ಮಧ್ಯಾಹ್ನ 12.30 ರವರೆಗೆ ಜಿಲ್ಲಾ ಲೋಕಾಯುಕ್ತ ಪೊಲೀಸ್​ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದು, ಸಾಯಂಕಾಲ 4 ಗಂಟೆಗೆ ಸಾರ್ವಜನಿಕ ಸಂಸ್ಥೆಗಳು ಹಾಗೂ ಸರ್ಕಾರಿ ಸಂಸ್ಥೆಗಳಿಗೆ ಭೇಟಿ ನೀಡಲಿದ್ದಾರೆ.

ಫೆ.5 ರಂದು ಬೆಳಗ್ಗೆ 9.45 ಕ್ಕೆ ವಕೀಲರ ಸಂಘದ ಸದಸ್ಯರೊಂದಿಗೆ ಸಾರ್ವಜನಿಕ ಆಡಳಿತ ಮತ್ತು ಉತ್ತಮ ಆಡಳಿತದಲ್ಲಿ ವಕೀಲರ ಪಾತ್ರ ಎಂಬ ವಿಷಯದ ಕುರಿತು ಸಂವಾದ ನಡೆಸಲಿದ್ದಾರೆ. ಮಧ್ಯಾಹ್ನ 12 ರಿಂದ 1.30 ರವರೆಗೆ ಹಾಗೂ ಮಧ್ಯಾಹ್ನ 2.30 ರಿಂದ 4.30 ರವರೆಗೆ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲೆಗೆ ಸಂಬಂಧಪಟ್ಟ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿರುವ ವಿಚಾರಣೆ ಮತ್ತು ತನಿಖೆ ಬಾಕಿಯಿರುವ ಪ್ರಕರಣಗಳಿಗೆ ಸಂಬಂಧಿಸಿದ ದೂರುದಾರರು ಹಾಗೂ ಎದುರುದಾರರ ಸಮ್ಮುಖದಲ್ಲಿ ವಿಚಾರಣೆ ನಡೆಸಲಿದ್ದಾರೆ. ರಾತ್ರಿ 9ಕ್ಕೆ ಬೆಂಗಳೂರಿಗೆ ಹಿಂದಿರುಗಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net